ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು.
144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದರು.
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…