ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಅರ್ಕಾವತಿ ನದಿಪಾತ್ರದ ಕೆರೆಗಳ ಹೋರಾಟ ಸಮಿತಿ‌ ಖಡಕ್ ಎಚ್ಚರಿಕೆ ನೀಡಿದೆ.

ಈ ಕುರಿತು ನಗರದ ಪ್ರವಾಸಿ‌ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ವಸಂತ್ ಮಾತನಾಡಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಹಾಗೂ ನಗರಸಭೆ ವ್ಯಾಪ್ತಿಯ ಕೊಳಚೆ ನೀರು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ‌ ಕಾರ್ಖಾನೆಗಳ ರಾಸಾಯನಿಕಯುಕ್ತ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರಿ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರಿನ ಘಟಕದವರೆಗೂ ಸಂಪೂರ್ಣ ಕಲುಷಿತಗೊಂಡಿರುವ ಕಾರಣ ಜನರು ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ.

ಚುನಾವಣೆ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರನ್ನು ನೀಡದ ಹೊರತು ಯಾರಿಗೂ ಮತ ನೀಡದೆ ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿ ಮನೆ‌ ಮನೆಗೆ ತರಳಿ ಸಹಿ ಸಂಗ್ರಹಿಸಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಸಹಿ ಸಂಗ್ರಹ ಪತ್ರ ನೀಡಿದ್ದೇವು. ಇದಕ್ಕೆ ಸ್ಪಂದಿಸಿದ್ದ ಅಧಿಕಾರಿಗಳು
ಜಕ್ಕಲಮಡಗು ಜಲಾಶಯದಿಂದ ಕುಡಿಯುವ ನೀರನ್ನು ಟ್ಯಾಂಕರ್ ಮುಖಾಂತರ ನೀಡಲಾಗುವುದು ಕೂಡಲೇ ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ಮಾಡಿ ಎಂದು ನಮಗೆ ಮನವೊಲಿಸಿ ಚುನಾವಣೆ ಬಹಿಷ್ಕಾರ ಹಿಂಪಡೆಯುವಂತೆ‌ ಚುನಾವಣಾಧಿಕಾರಿ ಮನವಿ ಮಾಡಿದ್ದರು. ಚುನಾವಣಾಧಿಕಾರಿ ಆದೇಶವಿದ್ದರೂ ಕೆಲವು ದಿನಗಳ ಕಾಲ ನೀರು ಗ್ರಾಮಗಳಿಗೆ ಬಂದಿರಲಿಲ್ಲ, ಏಕೆ ಬರಲಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯಲ್ಲಿ ವಿಚಾರಿಸಿದರೆ ನಮ್ಮಲ್ಲಿ ಟ್ಯಾಂಕರ್ ವ್ಯವಸ್ಥೆ ಇಲ್ಲ, ಟ್ಯಾಂಕರ್ ವ್ಯವಸ್ಥೆ ನೀವೆ ಮಾಡಿ‌ ನಾವು ಅದರ ಬಾಡಿಗೆ ನೀಡುತ್ತೇವೆ ಎಂದು ತಿಳಿಸಿದಾಗ ನಾವು ಟ್ಯಾಂಕರ್ ವ್ಯವಸ್ಥೆ ಮಾಡಿಕೊಟ್ಟಿದ್ದೇವೆ, ಆದರೆ ಇಲ್ಲಿಯವರೆಗೆ ಟ್ಯಾಂಕರ್ ಬಾಡಿಗೆ ನೀಡದೆ ನೀರು ಸರಬರಾಜು ಮಾಡುವುದನ್ನ ನಿಲ್ಲಿಸಿದ್ದಾರೆ. ಏಕೆ‌ ಬಾಡಿಗೆ ನೀಡುತ್ತಿಲ್ಲ ಎಂದು ಕೇಳಿದಾಗ ಹಾರಿಕೆ ಉತ್ತರ ನೀಡುವ ಸಂಬಂಧಿಸಿದ ಇಲಾಖಾಧಿಕಾರಿಗಳು ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಂದಲೂ ನಮಗೆ ಮೋಸ:

ಜನಪ್ರತಿನಿಧಿಗಳಂತೆ ಅಧಿಕಾರಿಗಳು‌ ಕೊಟ್ಟ ಮಾತಿಗೆ ನಡೆದುಕೊಳ್ಳದೆ ಗ್ರಾಮಸ್ಥರಿಗೆ ಮೋಸ‌ ಮಾಡಿದ್ದಾರೆ. ಕಲುಷಿತ ನೀರು ಕುಡಿದು ಹಳ್ಳಿಗಳ ಜನರಲ್ಲಿ ಈಗಾಗಲೇ ಹಲವು ರೋಗ ರುಜಿನಗಳು ವಕ್ಕರಿಸಿವೆ. ಆದ್ದರಿಂದ ಜನರ ಪ್ರಾಣ ಉಳಿಸಲು, ರೋಗಗಳಿಂದ ಪಾರು ಮಾಡಲು ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಜೂನ್ 19 ರಿಂದ ತಾಲೂಕು ಕಚೇರಿ ಮುಂಭಾಗ ಅಮರಣಾಂತಿಕ ಉಪವಾಸ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಕಣ್ಣಿದ್ದು ಕುರುಡಾದ ಆಡಳಿತ:

ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ವೀರಾಪುರ, ಬಾಶೆಟ್ಟಿಹಳ್ಳಿ ಕೆರೆ ಸೇರಿ ಹಲವು ಕೆರೆಗಳು ರಾಸಾಯನಿಕಯುಕ್ತ ತ್ಯಾಜ್ಯ ನೀರು, ಕಲುಷಿತ ಯುಜಿಡಿ ನೀರು ಹೀಗೆ ನಾನಾ ರೀತಿಯಲ್ಲಿ
ನಿತ್ಯ ಕಲುಷಿತಗೊಳ್ಳುತ್ತಲೇ ಇವೆ. ಕೆರೆ ಸಂರಕ್ಷಣೆ ಮಾಡುವಂತೆ ಈಗಾಗಲೇ ರಾಜ್ಯ ಹೆದ್ದಾರಿ ತಡೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ, ನಗರಸಭೆ, ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ, ಸಂಬಂಧಪಟ್ಟ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸೇರಿ ಮನವಿ ಮಾಡಿದರೂ ಈವರೆಗೆ ಯಾವುದೇ ರೀತಿಯ ಶುದ್ಧೀಕರಣಕ್ಕೆ ಯಾರೊಬ್ಬರು ಮುಂದಾಗಿಲ್ಲ. ಹೀಗಾಗಿ ಸೋಮವಾರದಿಂದ ಹೋರಾಟಗಾರರು ಅಮರಣಾಂತಿಕ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಹಸಿರು ನ್ಯಾಯಪೀಠಕ್ಕೂ ಅರ್ಜಿ:

ಯಾವುದೇ ಹೋರಾಟ, ಮನವಿಗಳಿಗೆ ಬಗ್ಗದ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟ ಸಮಿತಿಯೂ ಕೆರೆಗಳನ್ನು ಉಳಿಸಿಕೊಳ್ಳಲು ಸುಪ್ರೀಂಕೋರ್ಟ್ ಹಸಿರು ನ್ಯಾಯಪೀಠಕ್ಕೂ ಅರ್ಜಿ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago