ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು ಎಂದು ಅರ್ಕಾವತಿ ನದಿ ಪಾತ್ರಗಳ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕೆರೆ ಹೋರಾಟ ಸಮಿತಿ ವತಿಯಿಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಸಚಿವರಿಗೆ ಮನವಿ ಸಲ್ಲಿಸಿದ ಮುಖಂಡರು ಮಾಹಿತಿ ನೀಡಿ, ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಒಳಚರಂಡಿ ನೀರನ್ನು ಶುದ್ದೀಕರಿಸದೆ ದೊಡ್ಡತುಮಕೂರು ಹಾಗೂ ಚಿಕ್ಕತುಮಕೂರು ಕೆರೆಗಳಿಗೆ ನೇರವಾಗಿ ಬಿಡಲಾಗುತ್ತಿದೆ. ಇದಲ್ಲದೇ ಕಾರ್ಖಾನೆಗಳ ತ್ಯಾಜ್ಯ ನೀರು ರಾಜಕಾಲುವೆ ಮುಖಾಂತರ ಕೆರೆಗಳಿಗೆ ಹರಿಯುತ್ತಿದೆ. ಇದರ ಪ್ರತಿಫಲವಾಗಿ ಕೊಳವೆಬಾವಿಗಳ ನೀರು ಕುಡಿಯಲು ಯೋಗ್ಯವಿಲ್ಲ ಎನ್ನುವ ವರದಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ನೀಡಿದ್ದಾರೆ.
ಈ ನಿಟ್ಟಿನಲ್ಲಿ ತ್ಯಾಜ್ಯ ನೀರಿನ ಶುದ್ದೀಕರಣಕ್ಕಾಗಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಶೀಘ್ರವೇ ನಿರ್ಮಿಸುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿ, ಕೆರೆಗಳಲ್ಲಿ ತ್ಯಾಜ್ಯ ಶುದ್ಧೀಕರಣ ಘಟಕ ಅಳವಡಿಸಲು ಅವಕಾಶವಿದ್ದು, ಇದನ್ನು ನಿಯಮಾನುಸಾರ ಪಾಲಿಸಬೇಕು. ನಾಗರಕೆರೆಯಲ್ಲಿರುವ ಒಳಚರಂಡಿ ಪೈಪ್ ಗಳನ್ನು ಸ್ಥಳಾಂತರಿಸಲು ಸ್ಥಳಾವಕಾಶದ ಕೊರತೆ ಇರುವುದರಿಂದ, ಕೆರೆಯ ಬಫರ್ ಜೋನ್ ನಲ್ಲಿ ಅಳವಡಿಸುವ ಅನಿವಾರ್ಯತೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು.
ದೊಡ್ಡತುಮಕೂರು,ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮಗಳ ಕುಡಿಯುವ ನೀರಿನ ಯೋಜನೆಯಾಗಿ ₹12 ಕೋಟಿ ವೆಚ್ಚದ ಯೋಜನಾವರದಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಇಲಾಖೆಗೆ ಕಳುಹಿಸಲಾಗಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಳುಹಿಸಲಾಗುವುದು ಎಂದು ಜಿಲಾಧಿಕಾರಿ ಎನ್.ಶಿವಶಂಕರ ಮಾಹಿತಿ ನೀಡಿದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…