ಕೆರೆಗೆಳ‌ ಸಂರಕ್ಷಣೆಗೆ ಅಗತ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲವಾದ್ದರಿಂದ ಅಂತರ್ಜಲ ಮಟ್ಟ ಹೆಚ್ಚಿಸಲು ಜಿಲ್ಲೆಯಲ್ಲಿರುವ ಕೆರೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ನಾಗರಕೆರೆ ನಿರ್ವಹಣೆ ಯೋಜನೆ ಮತ್ತು ಅರ್ಕಾವತಿ ಜಲಾನಯನದ ಸಂರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆಗೆ ಜಿಲ್ಲಾಡಳಿತವು ಸದಾ ಕಾರ್ಯಪ್ರವೃತ್ತಿ ಆಗಿರುತ್ತದೆ. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ನಾಗರಕೆರೆ ನಿರ್ವಹಣಾ ಯೋಜನೆ ಅಡಿ ನಾಗರಕೆರೆಯನ್ನು ಸಂರಕ್ಷಿಸಲು ಜಿಲ್ಲಾಡಳಿತ ವತಿಯಿಂದ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ.

ನಾಗರಕೆರೆಯು 20 ಹೆಕ್ಟೇರ್ ನಷ್ಟು ವಿಸ್ತೀರ್ಣ ಹೊಂದಿದ್ದು ಕೆರೆಯ ಸುತ್ತಲೂ ಸಸಿಗಳನ್ನು ನೆಡಲಾಗಿದೆ. ಇನ್ನುಳಿದ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸಸಿ ನೆಡಸಲು ಕ್ರಮ ವಹಿಸಲಾಗುವುದು. ಕೆರೆಯ ನೀರು ಕಲುಷಿತವಾಗದಂತೆ ತಡೆಯಲು ಹಾಗೂ ಕೆರೆಗೆ ಕೊಳಚೆ ನೀರನ್ನು ತಲುಪದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಯಲ್ಲಿ ಬೆಳೆದು ನಿಂತಿರುವ ಕಳೆಯನ್ನು ತೆಗೆಯಲು ಅಗತ್ಯ ಕ್ರಮ ವಹಿಸಿ ಕೆರೆ ಸುತ್ತಲೂ ಬೇಲಿ ನಿರ್ಮಿಸಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

WWF(WORLD WDE FUND FOR NATURE) ಸಂಸ್ಥೆಯು Building community resilience through nature based solutions ಎಂಬ ಸಂಶೋಧನೆ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗರಕೆರೆಯನ್ನು ಸಂರಕ್ಷಿಸಲು ಯೋಜನೆ ರೂಪಿಸಿದೆ.

ಕೆರೆಯ ನೀರಿನ ಗುಣಮಟ್ಟ ಹಾಗೂ ಕೆರೆಯ ನೀರು ಕಲುಷಿತಗೊಳ್ಳುವುದನ್ನು ತಪ್ಪಿಸಲು ಕೆಲವು ಅಂಶಗಳನ್ನು ಪ್ರಸ್ತಾಪಿಸಿದೆ. ತ್ಯಾಜ್ಯ ನಿರ್ವಹಣೆ, ನೀರಿನ ಹರಿವು ತಿಳಿಯುವ ಬಗೆ, ನೀರಿನ ಗುಣಮಟ್ಟ ಕಾಪಾಡುವಿಕೆಗೆ ಫ್ಲೋಟಿಂಗ್ ಫೌಂಟೇನ್ ಅಳವಡಿಕೆ, ಸ್ಥಳಿಯ ಮರಗಳ ಬೆಳವಣಿಗೆಗೆ ಉತ್ತೇಜನ, ಕೆರೆಯಲ್ಲಿನ ಕಳೆ ನಾಶಪಡಿಸಲು ಕ್ರಮ ಕೈಗೊಳ್ಳುವುದು, ಕೆರೆಗೆ ಬರುವ ನೀರಿನ ಪ್ರಮಾಣ ಹೆಚ್ಚಿಸಲು ರಾಜಕಾಲುವೆಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೆರೆ ಸಂರಕ್ಷಣೆ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸ್ಥೆಯವರು ತಿಳಿಸಿ ಜಿಲ್ಲಾಡಳಿದ ಸಹಕಾರ ಕೋರಿದರು.

ಇದಕ್ಕೆ ಜಿಲ್ಲಾಧಿಕಾರಿಗಳು ಸಹಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರಲ್ಲದೆ ಸಂಸ್ಥೆಗೆ ಧನ್ಯವಾದ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶಾಲಿನಿ, ಹಿರಿಯ ಭೂ ವಿಜ್ಞಾನಿ ಪಲ್ಲವಿ, ಡಬ್ಲ್ಯೂ.ಡಬ್ಲ್ಯೂ.ಎಫ್ ನ ಕೆರೆ ಸಂರಕ್ಷಣಾ ಸಹಾಯಕ ನಿರ್ದೇಶಕ ಡಾ. ಅಮಿತ್ ದುಬೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 minutes ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

4 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

4 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

6 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

11 hours ago