ಕೆರೆಯಲ್ಲಿ ಈಜಲು ಹೋದ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಅದರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಇಂದು ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನ ತಾಲೂಕಿನ ಲಘುಮೇನಹಳ್ಳಿ ಗ್ರಾಮದ ಶ್ರೀನಿವಾಸ್ (20) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನೂ ಮೃತದೇಹ ಪತ್ತೆಯಾಗದ ಹಿನ್ನೆಲೆ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.