ನ.6ರಂದು ಕೆರೆಯಲ್ಲಿ ಈಜಲು ಹೋದ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಅದರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದನು. ಇಂದು (ನ.8) ಮೃತ ದೇಹ ಪತ್ತೆಯಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದ. ನ.6ರಿಂದ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ, ಶವ ಪತ್ತೆಯಾಗಿರಲಿಲ್ಲ. ಸತತವಾಗಿ ಶೋಧ ಕಾರ್ಯ ಮುಂದುವರಿಸಿದ ಪರಿಣಾಮ ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿಯನ್ನ ತಾಲೂಕಿನ ಲಗುಮೇನಹಳ್ಳಿ ಗ್ರಾಮದ ಶ್ರೀನಿವಾಸ್ (21) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಮೃತದೇಹಕ್ಕಾಗಿ ನಿರಂತರವಾಗಿ ಮೂರು ದಿನಗಳಿಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿಆರ್ ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸಿತ್ತು.
ಮೃತದೇಹವನ್ನ ದಡಕ್ಕೆ ಸೇರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್ ಡಿಆರ್ ಎಫ್ ತಂಡ ಯಶಸ್ವಿಯಾಗಿದೆ. ಸದ್ಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…