ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಂದೆ-ಮಗ ಮೃತದೇಹಗಳು ತೇಲುತ್ತಿರುವ ದೃಶ್ಯ ಇಂದು ಬೆಳಗ್ಗೆ ಕಂಡುಬಂದಿದ್ದು, ಕೂಡಲೇ ಪೊಲೀಸ್ ಇಲಾಖೆ ಸಿಬ್ಬಂದಿ ಕೆರೆಯಿಂದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.
ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿತ್ತು.
ನಿನ್ನೆ ಸಂಜೆ ಕತ್ತಲಾದ ಆದ ಕಾರಣ ಕೆರೆಯಿಂದ ಮೃತದೇಹಗಳನ್ನು ಹೊರ ತೆಗೆಯಲು ಆಗದೇ ಇರುವುದರಿಂದ ಇಂದು ಬೆಳಗ್ಗೆ ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.