ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು ಕೇಸ್: ಕೆರೆಯಿಂದ ಮೃತ ದೇಹಗಳನ್ನು ಹೊರತೆಗೆದ ಸಿಬ್ಬಂದಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

 

ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಂದೆ-ಮಗ ಮೃತದೇಹಗಳು ತೇಲುತ್ತಿರುವ ದೃಶ್ಯ ಇಂದು ಬೆಳಗ್ಗೆ ಕಂಡುಬಂದಿದ್ದು, ಕೂಡಲೇ ಪೊಲೀಸ್ ಇಲಾಖೆ ಸಿಬ್ಬಂದಿ ಕೆರೆಯಿಂದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿತ್ತು.

ನಿನ್ನೆ ಸಂಜೆ ಕತ್ತಲಾದ ಆದ ಕಾರಣ ಕೆರೆಯಿಂದ ಮೃತದೇಹಗಳನ್ನು ಹೊರ ತೆಗೆಯಲು ಆಗದೇ ಇರುವುದರಿಂದ ಇಂದು ಬೆಳಗ್ಗೆ ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ.

ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

9 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

10 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

12 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

16 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

16 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

17 hours ago