ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿರುವ ಮುತ್ಯಾಲಮ್ಮ ದೇವಾಲಯ ಸಮೀಪ ವಾಸವಿದ್ದ ಪುಟ್ಟರಾಜು(45), ಕೇಶವ( 16) ಮೃತಪಟ್ಟ ದುರ್ದೈವಿಗಳು.
ನಗರದ ಜ್ಞಾನಗಂಗಾ ಶಾಲೆಯಲ್ಲಿ ಎಸ್ಎಸ್ಎಲ್ ಸಿ ಓದುತ್ತಿದ್ದ ಬಾಲಕ ಕೇಶವ ಬುಧವಾರ ತಂದೆಯೊಂದಿಗೆ ಹುಲುಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿದ್ದರು.
ಬಾಲಕ ಕೇಶವ ತಾವರೆ ಹೂವು ಕೀಳಲು ನೀರಿಗಿಳಿದಾಗ ಕಾಲು ಜಾರಿ ಹಾಳಕ್ಕೆ ಹೋಗಿ ಮುಳುಗುತ್ತಿದ್ದ. ಈ ವೇಳೆ ಮಗನ ರಕ್ಷಣೆಗೆ ಧಾವಿಸಿದ ತಂದೆ ಪುಟ್ಟರಾಜು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ತಂದೆ-ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಇನ್ಸ್ ಪೆಕ್ಟರ್ ಹರೀಶ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಕತ್ತಲಾದ ಆದ ಕಾರಣ ಮೃತದೇಹಗಳನ್ನು ನಾಳೆ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಹೊರತೆಗೆಯಲಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…