ಬೆಂಗಳೂರು ಗ್ರಾಮಾಂತರ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೊಡ್ಡಸಾಗರಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಜೇಶ್ (36) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ರಾಜೇಶ್ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಕೆಲಸಕ್ಕೆ ತೆರಳಿದ್ದ ಅವರು ಮನೆಗೆ ಮರಳಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಈ ನಡುವೆ ಮೃತ ರಾಜೇಶ್ ತಮ್ಮನಿಗೆ ಕರೆ ಮಾಡಿ, “ಸಾಲ ಕಟ್ಟಬೇಕು, ಹಣ ಕಳಿಸು” ಎಂದು ಹೇಳಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಬಳಿಕ ಅವರ ಸಂಪರ್ಕ ಕಡಿತವಾಗಿದ್ದು, ಇದೀಗ ಗ್ರಾಮದ ಸಮೀಪದ ಕೆರೆಯ ಅಂಗಳದಲ್ಲಿ ಶವ ಪತ್ತೆಯಾಗಿದೆ.
ರಾಜೇಶ್ ಬಡ್ಡಿ ದಂಧೆಯವರ ಬಳಿ ಸಾಲ ಪಡೆದಿದ್ದ ಹಿನ್ನೆಲೆ, ಹಣದ ವಿಚಾರವಾಗಿ ಅವರೇ ಕೊಲೆ ಮಾಡಿ ಕೆರೆಯ ಅಂಗಳದಲ್ಲಿ ಬಿಸಾಡಿರಬಹುದು ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಿಶ್ವನಾಥಪುರ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…