ಟಿವಿಸ್ ಸ್ಕೂಟರ್ ಗೆ ಟಾಟಾ ಏಸ್ ಗಾಡಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಇಂದು ಮಧ್ಯಾಹ್ನ ನಡೆದಿದೆ.
ಗಾಯಾಳು ಬೈಕ್ ಸವಾರನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಕೆರೆ ಏರಿ ಮೇಲಿನ ತಿರುವಿನಲ್ಲಿ ದೊಡ್ಡಬಳ್ಳಾಪುರ ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಟಾಟಾ ಏಸ್ ಗಾಡಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನುಜ್ಜುಗೊಜ್ಜಾಗಿ ಕೆರೆಯ ಬ್ಯಾರಿಕೇಟ್ ನಿಂದ ಹೊರಗೆ ಬಿದ್ದಿದೆ. ರಸ್ತೆ ಅಪಘಾತದಿಂದ ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನಗಳು ಸಿಲುಕಿಕೊಂಡಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.