ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ. ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿ ಮಾತನಾಡಿದ ಅವರು, 2023ರ ಏಪ್ರಿಲ್ 1ರ ವೇಳೆಗೆ ಇಲಾಖೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಮೊತ್ತ- 22,304 ಕೋಟಿ ರೂ. ಇದ್ದು, ಅದರಲ್ಲಿ 31-3-2023ರ ವರೆಗೆ 9602 ಕೋಟಿ ರೂ. ವೆಚ್ಚವಾಗಿದೆ. 2023-24ನೇ ಸಾಲಿಗೆ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾದ ಮೊತ್ತ 12,696 ಕೋಟಿ ರೂ. ಆಗಿದೆ. ಇಲಾಖೆಯಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ನಿರ್ವಹಿಸಲು ಬೇಕಾಗುವ ಬಾಕಿ ಮೊತ್ತ 11,904 ಕೋಟಿ ರೂ. ನಷ್ಟಿದೆ. ಕಾಮಗಾರಿ ಪ್ರಾರಂಭವಾಗಿದ್ದರೆ ಅಂತಹ ಯೋಜನೆಗಳನ್ನು ಮುಂದುವರೆಸಿ, ಪ್ರಾರಂಭವಾಗದ ಕಾಮಗಾರಿಗಳನ್ನು ಕೈಬಿಡಿ ಎಂದು ಸೂಚಿಸಿದರು.
ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ ಮತ್ತು ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾಮಗಾರಿ ಭೂಮಿಯ ಲಭ್ಯತೆಯ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಭೂಮಿ ಲಭ್ಯವಾಗಿರುವುದರಿಂದ ಕಾಮಗಾರಿ ಶೀಘ್ರವೇ ಪ್ರಾರಂಭಿಸಬೇಕು. ಮೈಸೂರು ನಗರದಲ್ಲಿ ಸ್ಥಳ ಒದಗಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳಿಗೆ ದೂರವಾಣಿ ಸೂಚನೆ ನೀಡಿದ್ದೇನೆ. ವಿಜ್ಞಾನ ನಗರಿ ನಿರ್ಮಿಸಲು ಭಾರತ ಸರ್ಕಾರ ಅನುಮೋದನೆ ನೀಡಿದ್ದು, 100 ಕೋಟಿಯ ಈ ಯೋಜನೆಗೆ ಬೆಂಗಳೂರು ನಗರದ ಹೊರ ವಲಯದಲ್ಲಿ 25 ಎಕರೆ ಜಾಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…