ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ, ಜಿಲ್ಲಾಡಳಿತ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ “ಕೆರೆ ಸಂರಕ್ಷಣೆ ಮಾಡುವಲ್ಲಿ ಸರ್ಕಾರಿ ಅಧಿಕಾರಿಗಳ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಕಾರ್ಯಾಗಾರ” ವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೆಪ್ಟೆಂಬರ್ 16 ರ ಶನಿವಾರದಂದು ಬೆಳಗ್ಗೆ 09.00 ಗಂಟೆಗೆ ಏರ್ಪಡಿಸಲಾಗಿದೆ.
ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಾನ್ಯ ಶ್ರೀ ಎಮ್.ಎಲ್. ರಘುನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿರಾದರ್ ದೇವೇಂದ್ರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಮಧುಸೂಧನ ಡಿ.ಕೆ, ದೇವನಹಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಮುನಿರಾಜ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ರಿಜಿಸ್ಟಾರ್ ಎಚ್.ಕೆ.ನವೀನ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.