Categories: ರಾಜ್ಯ

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ-ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ‌ ಕಿಡಿ

2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ!, ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಜೀವಂತ ಸಾಕ್ಷಿ ಎಂದು ಕಾಂಗ್ರೆಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?‌ಪ್ರಮಾಣವನ್ನೇ ಸ್ವೀಕರಿಸದ ನಿಯೋಜಿತ ಮುಖ್ಯಮಂತ್ರಿ ಯಾವುದಾದರೂ ಆದೇಶ ನೀಡಲು ಸಾಧ್ಯವೇ? ಇಷ್ಟಕ್ಕೂ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭಕ್ಕೂ, ಪಕ್ಷದ ಕಾರ್ಯಕ್ರಮಕ್ಕೂ ಹೋಲಿಕೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇಷ್ಟು ಸಾಮಾನ್ಯ ತಿಳಿವಳಿಕೆ ಸ್ವತಃ ಮುಖ್ಯಮಂತ್ರಿ ಹಾಗೂ ಸಂಸದೀಯ ಸಚಿವರಿಗೆ ಇಲ್ಲ ಎಂದರೆ ಏನು ಹೇಳುವುದು? ಇಂಡಿಯಾ ಒಕ್ಕೂಟದ ಸಭೆಗೆ ಬಂದ ಹೊರರಾಜ್ಯಗಳ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ಚಾಕರಿಗೆ ಬಿಟ್ಟಿದ್ದು ತಪ್ಪು ಎಂಬುದು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಗಿಳಿಪಾಠ ಒಪ್ಪಿಸುವ ಸ್ವಯಂಘೋಷಿತ ಸಂವಿಧಾನ ತಜ್ಞರಿಗೆ ಶೋಭೆಯೇ? ಎಂದು ಗುಡುಗಿದ್ದಾರೆ.

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ ಎಂದಿದ್ದಾರೆ.

ಅಷ್ಟೇ ಅಲ್ಲ, ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

35 minutes ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

9 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

23 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

24 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago