ಸ್ನೇಹಿತರ ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯ…?ವಾಗಿರುವ ಘಟನೆ ತಾಲೂಕಿನ ಹೆಗ್ಗಡಿಹಳ್ಳಿ ಬಳಿ ನಡೆದಿದೆ…
ವಿಜಯಕುಮಾರ್( 30) ಮೃತ ದುರ್ದೈವಿ.
ಗಲಾಟೆ ವೇಳೆ ಮೃತ ವಿಜಯಕುಮಾರ್ ತಲೆಗೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಪೂಜಪ್ಪ(45), ಎಂಬಾತ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಮಾಲೂರು ಮೂಲದ ಶ್ರೀನಿವಾಸ, ಮುರುಗೇಶ, ಪೂಜಪ್ಪ, ನಾಗರಾಜ ಜೊತೆ ಮೃತ ವಿಜಯಕುಮಾರ್ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಪೈಪ್ ಲೈನ್ ಹಾಕಲು ಆಗೆದಿರುವ ಕಾಂಕ್ರಿಟ್ ರಸ್ತೆಯ ಸೈಡ್ ಲೈನ್ ಗೆ ಕಾಂಕ್ರಿಟ್ ಹಾಕುವ ಕೆಲಸಕ್ಕೆ ಬಂದಿದ್ದರು.
ಒಂದೇ ಕೊಠಡಿಯಲ್ಲಿ ಇದ್ದ ಐದು ಜನರ ನಡುವೆ ಜೂ.13ರ ಶುಕ್ರವಾರ ರಾತ್ರಿ ಘಟನೆ ನಡೆದಿದೆ, ಇದರಲ್ಲಿ ವಿಜಯಕುಮಾರ್ ತಲೆಗೆ ತೀವ್ರ ಪೆಟ್ಟಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿಜಯಕುಮಾರ್ ಸಾವನ್ನಪ್ಪಿರುವ ಮಾಹಿತಿ ಜೂ.14 ಶನಿವಾರದಂದು ಸಂಬಂಧಿಕರಿಗೆ ತಿಳಿದಿದೆ.
ಪೂಜಪ್ಪನೇ ಕೊಲೆ ಮಾಡಿದ್ದಾನೆ ಎಂದು ಸಂಬಂಧಿಕರು ಅನುಮಾನಗೊಂಡು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…