ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿದ ಉಪವಿಭಾಗಾಧಿಕಾರಿಯೂ ಆಗಿರುವ ಚುನಾವಣಾಧಿಕಾರಿ ಎನ್.ತೇಜಸ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಸ್ಥರ ಅಹವಾಲು ಆಲಿಸಿತು.
ಗ್ರಾಮದ ಸರ್ವೇ ನಂ.8 ರಲ್ಲಿ ಅರಣ್ಯ ಇಲಾಖೆ ಹೊರತುಪಡಿಸಿ ಜಾಗದಲ್ಲಿ 50ಕ್ಕೂ ಹೆಚ್ಚು ಮಂದಿ ಉಳುಮೆ ಮಾಡಿಕೊಂಡಿದ್ದಾರೆ. ಕಂದಾಯ ಇಲಾಖೆ ನೀಡಿರುವ ಸಾಗುವಳಿ ಚೀಟಿಯೂ ಇದೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ. ಭೂಮಿ ನೀಡಲು ಸಾಧ್ಯವಾಗದಿದ್ದರೆ ಗ್ರಾಮದ ಎಲ್ಲರಿಗೂ ದಯಾಮರಣಕ್ಕೆ ಅವಕಾಶ ನೀಡಿ ಎಂದು ಮುಖಂಡರಾದ ಕೃಷ್ಣನಾಯಕ, ಎನ್.ಪ್ರಸಾದ್, ರಾಜಾರಾಮನಾಯಕ, ಎಸ್.ಎಸ್.ಘಾಟಿ ಗ್ರಾ.ಪಂ. ಅಧ್ಯಕ್ಷ ಭಾರತಿಬಾಯಿ ಅಲವತ್ತುಕೊಂಡರು.
ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿರುವ ಪ್ರಕರಣ ಜೂನ್ ತಿಂಗಳಲ್ಲಿ ವಿಚಾರಣೆಗೆ ಬರಲಿದೆ. ಚುನಾವಣೆ ಮುಗಿದ ಬಳಿಕ ಕಂದಾಯ ಹಾಗೂ ಅರಣ್ಯ ಇಲಾಖೆ ನೇತೃತ್ವದಲ್ಲಿ ಜಂಟಿಸರ್ವೇ ನಡೆಸಬೇಕು. ಅಲ್ಲಿಯವರೆಗೆ ಯಾವ ಅಧಿಕಾರಿಗಳು ಕೂಡ ರೈತರಿಗೆ ತೊಂದರೆ ನೀಡಬಾರದು. ವಿವಾದವನ್ನು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸಿ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿಗಳ ಭರವಸೆಗೆ ಒಪ್ಪಿ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಹಿಂಪಡೆದರು.
ಗ್ರಾಮದ ಮುಖಂಡ ಎನ್.ಪ್ರಸಾದ್ ಮಾತನಾಡಿ, ಉಪವಿಭಾಗಾಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅವರ ಮಾತಿಗೆ ಒಪ್ಪಿ ಬಹಿಷ್ಕಾರ ಹಿಂಪಡೆದಿದ್ದೇವೆ. ಒಂದು ವೇಳೆ ಭರವಸೆ ಈಡೇರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂದಿನ ಲೋಕಸಭೆ ವೇಳೆ ಮತ್ತೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…