ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್ ಎನ್ ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮಂಚೇನಹಳ್ಳಿ ರಸ್ತೆಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ ಎಚ್ ಮುನಿಯಪ್ಪ ಪ್ರೀಮಿಯರ್ ಲೀಗ್ ಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯ. ಸೋಲು, ಗೆಲುವು ಸರ್ವೇ ಸಾಮಾನ್ಯ, ಎರಡನ್ನು ಸಮಾನವಾಗಿ ಕಾಣಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.
ನಂತರ ತೂಬಗೆರೆ ಹೋಬಳಿಯ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಹಿರೇಮುದ್ದೇನಹಳ್ಳಿ ರಸ್ತೆ ಕಾಮಗಾರಿಗೆ ಅತಿ ಶೀಘ್ರವಾಗಿ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಭರವಸೆ ನೀಡಿದರು..
ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ದೇವನಹಳ್ಳಿ ವಿಧಾನ ಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಗರ್ ಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ನರ್ವಿಜ್, ಭೂ ಮಂಜೂರಾತಿ ಕಮಿಟಿ ಸದಸ್ಯ ಶ್ರೀಧರ್, ಕೃಷಿಕ ಸಮಾಜದ ಅಧ್ಯಕ್ಷ ಮುರಳಿ, ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್ ಎನ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…
ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ…
ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…