ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್ ಎನ್ ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮಂಚೇನಹಳ್ಳಿ ರಸ್ತೆಯ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ ಎಚ್ ಮುನಿಯಪ್ಪ ಪ್ರೀಮಿಯರ್ ಲೀಗ್ ಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಅತ್ಯಂತ ಶ್ಲಾಘನೀಯ. ಸೋಲು, ಗೆಲುವು ಸರ್ವೇ ಸಾಮಾನ್ಯ, ಎರಡನ್ನು ಸಮಾನವಾಗಿ ಕಾಣಬೇಕು. ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು.

ನಂತರ ತೂಬಗೆರೆ ಹೋಬಳಿಯ ಗ್ರಾಮಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಹಿರೇಮುದ್ದೇನಹಳ್ಳಿ ರಸ್ತೆ ಕಾಮಗಾರಿಗೆ ಅತಿ‌ ಶೀಘ್ರವಾಗಿ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಭರವಸೆ ನೀಡಿದರು..

ಈ ವೇಳೆ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ್, ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ದೇವನಹಳ್ಳಿ ವಿಧಾನ ಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಗರ್ ಜಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ನರ್ವಿಜ್, ಭೂ ಮಂಜೂರಾತಿ ಕಮಿಟಿ ಸದಸ್ಯ ಶ್ರೀಧರ್, ಕೃಷಿಕ ಸಮಾಜದ ಅಧ್ಯಕ್ಷ ಮುರಳಿ, ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್ ಎನ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Ramesh Babu

Journalist

Recent Posts

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

4 hours ago

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…

9 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…

10 hours ago

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

16 hours ago

ನಾಯಿ ಕಡಿತದ ಸುಳಿಗೆ ಮಕ್ಕಳು: ನಾಲ್ಕು ವರ್ಷದಲ್ಲಿ 4.21 ಲಕ್ಷ ಪ್ರಕರಣ: ರೇಬಿಸ್‌ಗೆ ಮಕ್ಕಳ ಸಾವು

ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…

20 hours ago

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 day ago