ಕೆ.ಎಚ್ ಮುನಿಯಪ್ಪನವರ ಅನುಭವಕ್ಕೆ ನ್ಯಾಯ ಸಿಗಲಿ: ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಆಗ್ರಹ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ ಆಗುವ ಕಾಲ ಬಂದಿದೆ. 7 ಬಾರಿ ಸಂಸದರು, ಕೇಂದ್ರ ಸಚಿವರೂ ಆಗಿ ಅಪಾರ ಅನುಭವ ಹೊಂದಿ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಹಿರಿಯ ಮತ್ಸದ್ದಿ ಕೆ.ಎಚ್. ಮುನಿಯಪ್ಪನವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಪುಟ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಘಾಟಿ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನುಭವಿ ಹಿರಿಯ ಕಾಂಗ್ರೆಸ್ಸಿಗರಾದ ಮುನಿಯಪ್ಪನವರಿಗೆ ಅರ್ಹತೆಗೆ ತಕ್ಕಂತ ಸಚಿವ ಸ್ಥಾನ ದೊರೆತಿರಲಿಲ್ಲ ಈಗ ಬದಲಾವಣೆ ಪರ್ವದಲ್ಲಿ ಅವರನ್ನು ಗುರ್ತಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.

ಕಾಂಗ್ರೆಸ್ ಮುಖಂಡ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರಂಗಪ್ಪ ಮಾತನಾಡಿ, ಕೇಂದ್ರ ಸಚಿವರಾಗಿ ಅನುಭವವಿದ್ದ ಮುನಿಯಪ್ಪನವರು ರಾಜ್ಯದಲ್ಲಿ ಗ್ಯಾರಂಟೀ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಂತಹ ಅಕ್ಕಿ ವಿತರಣೆಯ ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮೂರು ವರ್ಷಗಳಿಂದ ಅತ್ಯತ್ತಮ ಸೇವೆ ಸೇವೆ ಸಲ್ಲಿಸಿದ್ದು, ಈಗ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಇವರಿಗೆ ಡಿಸಿಎಂ. ಸ್ಥಾನ ನೀಡಲೇ ಬೇಕೆಂದರು.

ಮುನಿಯಪ್ಪನವರು ನಮ್ಮ ಕ್ಷೇತ್ರಕ್ಕೆ ಬಂದ ಮೇಲೆ ಇಲ್ಲಿಂದ ಸಚಿವರಾಗಿ ಯಾರೂ ಆಗಿಲ್ಲ ಎಂಬ ಕಳಂಕ ದೂರವಾಯಿತು. ರಾಹುಲ್ ಗಾಂಧಿ ಸೂಚನೆಯಂತೆ ಇಲ್ಲಿ ಬಂದು ನಿಂತು ಸಚಿವರಾದರು. ಅವರು ಕೇಳಿದ ಸ್ಥಾನವೇ ಬೇರೆ ಕೊಟ್ಟ ಖಾತೆಯೇ ಬೇರೆ. ಆದರೂ ಅವರು ಯಾವುದಕ್ಕು ಆಸೆ ಪಡದೆ ಪಕ್ಷ ನಿಷ್ಟರಾಗಿದ್ದಾರೆ. ಹಾಗಾಗಿ ಅಂತಹ ಅನುಭವಿ ರಾಜಕಾರಣಿಗೆ ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಮೊದಲ ಆದ್ಯತೆಯಾಗಿ ನೀಡಬೇಕೆಂದರು.

ಭೂ ಮಂಜೂರಾತಿ ಸಮಿತಿ ಸದಸ್ಯ ಗಂಗಸಂದ್ರ ಶ್ರೀಧರ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಆಗುತ್ತಿರುವುದು ಸಂತಸದ ವಿಷಯ. ಅದೇ ರೀತಿ 8 ವರ್ಷಗಳ ಕಾಲ ಉತ್ತಮ ಆಡಳಿತ ನೀಡಿ ಬಡವರ ಪಾಲಿನ ಭಾಗ್ಯರಾಮಯ್ಯ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಬ್ಬರಿಗೆ ಆ ಸ್ಥಾನದ ಅವಕಾಶ ಮಾಡಿಕೊಡುವ ಮೂಲಕ ತಾವೊಬ್ಬ ಬಲಿಷ್ಠ ದೊಡ್ಡ ನಾಯಕ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅದೇ ರೀತಿ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿರುವ ಕೆ.ಎಚ್. ಮುನಿಯಪ್ಪನವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿ ಎಡಗೈ ಸಮಾಜಕ್ಕೆ ಉನ್ನತ ಸ್ಥಾನ ನೀಡುವ ಮೂಲಕ ಬಹುಸಂಖ್ಯಾತ ಎಡಗೈ ಸಮಾಜದವರು ಕಾಂಗ್ರೆಸ್ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸವನ್ನು ಉಳಿಸಿಕೊಳ್ಳಬೇಕೆಂದರು.

ವಕೀಲ, ಕಾಂಗ್ರೆಸ್ ಬೆಂ ಜಿಲ್ಲಾ ಉಪಾಧ್ಯಕ್ಷ ಎಸ್ ಡಿ ಮುನಿರಾಜು ಮಾತನಾಡಿ,‌ ಕೆ.ಎಚ್ ಮುನಿಯಪ್ಪನವರಿಗೆ ಸರ್ಕಾರದಲ್ಲಿ ಉತ್ತಮ ಸ್ಥಾನ ಕೊಟ್ಟರೆ ಸರ್ಕಾರಕ್ಕೆ ಒಳ್ಳೆ ಗೌರವ ಬರುತ್ತೆ.‌ ಶುದ್ಧ ವ್ಯಕ್ತಿತ್ವದ ಮುನಿಯಪ್ಪನವರನ್ನು ಡಿಸಿಎಂ ಮಾಡಬೇಕು. ಅವರು ಕೇವಲ ಉಪಮುಖ್ಯಮಂತ್ರಿ ಸ್ಥಾನಕ್ಕೊಂದೇ ಅರ್ಹರಲ್ಲ. ಅವರು ಮುಖ್ಯಮಂತ್ರಿ ಸ್ಥಾನಕ್ಕೂ ಅರ್ಹರು.

ಮುನಿಯಪ್ಪನವರು ಸಕ್ರಿಯ ರಾಜಕಾರಣಿ. ಎಡಗೈ ಸಮುದಾಯದ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಲು ನೇರ ಕಾರಣ ಮುನಿಯಪ್ಪ. ಆದ ಕಾರಣ ಅಂತಹ ನಾಯಕರಿಗೆ ಉತ್ತಮ ಸ್ಥಾನಮಾನ ಕೊಟ್ಟು ಗೌರವಯುತವಾಗಿ ನಡೆಸಿಕೊಡಬೇಕು.

ಮುನಿಯಪ್ಪ ಅವರು ಕೇವಲ ಒಂದು ಜಾತಿಗೆ ಸೀಮರಲ್ಲ. ಅವರನ್ನು ಎಲ್ಲಾ ಜಾತಿ, ಧರ್ಮದವರು ನಾಯಕರನ್ನಾಗಿ ಸ್ವೀಕರಿಸಿದ್ದಾರೆ. ಮುಂದಿನ‌ ಚುನಾವಣೆಗಳ ಹಿತದೃಷ್ಠಿಯಿಂದ ಅವರಿಗೆ ಡಿಸಿಎಂ ಮಾಡಿ ಉತ್ತಮ‌ ಖಾತೆ ನೀಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ‌ ಮೇಳೆಕೋಟೆ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಚಿದಾನಂದ, ತೂಬಗೆರೆ ಹೋಬಳಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಆಂಜಿನಪ್ಪ, ಮಂಜುನಾಥ್ ಮೆಳೇಕೋಟೆ ಆಂಜಿನಪ್ಪ, ಲಕ್ಷ್ಮನಾಯಕ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

15 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago