ದೊಡ್ಡಬಳ್ಳಾಪುರ: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದು ಮಾದಾರ ಮಹಾಸಭಾ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಾರ ಮಹಾಸಭಾ ಮುಖಂಡ ರಾಮಕೃಷ್ಣ, ರಾಜ್ಯದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ 60 ಲಕ್ಷಕ್ಕೂ ಅಧಿಕವಾಗಿದ್ದು, ಇಂತಹ ದೊಡ್ಡ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ನ್ಯಾಯಯುತ ಹಾಗೂ ಬಲಿಷ್ಠ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು ಎಂದು ಹೇಳಿದರು.
ಕೆ.ಎಚ್. ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಜೊತೆಗೆ, ಆರ್.ಬಿ. ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಹಾಗೂ ಹೆಚ್. ಆಂಜನೇಯ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಮೂಲಕ ದಲಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.
ಮಾದಾರ ಮಹಾಸಭಾ ತಾಲೂಕು ಅಧ್ಯಕ್ಷ ತಳಗವಾರ ನಾಗರಾಜ್ ಮಾತನಾಡಿ, ಕೆ.ಎಚ್. ಮುನಿಯಪ್ಪ ಅವರು ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಅವರಿಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ರಾಜಕೀಯ ಶಕ್ತಿ ತುಂಬಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವಲ್ಲಿ ಮುನಿಯಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಮಾದಿಗ ಸಮುದಾಯದ ಮತಗಳನ್ನು ಕಾಂಗ್ರೆಸ್ ಪರವಾಗಿ ಕ್ರೋಢೀಕರಿಸಲು ಅವರು ಶ್ರಮಿಸಿದ್ದು, ಅದಕ್ಕೆ ತಕ್ಕ ಗೌರವವಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಇಲ್ಲಿಯವರೆಗೆ ಮಾದಿಗ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ದೊರೆತಿಲ್ಲ. ಕನಿಷ್ಠ ಈ ಬಾರಿ ಡಿಸಿಎಂ ಸ್ಥಾನ ಹಾಗೂ ಪ್ರಭಾವಿ ಖಾತೆಯನ್ನು ನೀಡಬೇಕು. ಸಮುದಾಯದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಬೇಕು. ಎಡಗೈ ಸಮುದಾಯವನ್ನು ನಿರ್ಲಕ್ಷಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಪಕಾರನಹಳ್ಳಿ ಹನುಮಯ್ಯ, ವೆಂಕಟೇಶ್, ಗಂಗರಾಜು, ವೆಂಕಟೇಶ್, ಕೆ.ವಿ. ಮುನಿಯಪ್ಪ, ಹನುಮಂತಯ್ಯ, ಪುರುಷೋತ್ತಮ್, ಲಕ್ಕಪ್ಪ, ಆರ್.ವಿ. ಮಹೇಶ್, ಆರ್.ವಿ. ಶಿವಕುಮಾರ್, ಆರ್.ವಿ. ಮನು, ಶ್ರೀರಾಮ್, ಮಂಜುನಾಥ್, ಮುನಿರಾಜು, ನಾಗರಾಜು, ಚಿಕ್ಕನರಸಪ್ಪ, ಮುನಿರಾಜು, ಟಿ.ಡಿ. ಮುನಿಯಪ್ಪ ಸೇರಿದಂತೆ ಮಾದಾರ ಮಹಾಸಭಾದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…