ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸುಜಾ ಕೆ.ಜೆ. ಜಾರ್ಜ್ ಅವರು ಪ್ರಮಾಣಪತ್ರ ವಿತರಿಸಿದರು.
ಕೆ.ಜಿ. ಹಳ್ಳಿಯಲ್ಲಿ ಸ್ಥಾಪಿಸಿರುವ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಅವರು, “ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಬೆಂಬಲದೊಂದಿಗೆ ಈ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರು ಸಬಲೀಕರಣ ಸಾಧ್ಯವಾಗಿದೆ,” ಎಂದರು.
“ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಕಲೆ ಮತ್ತು ಕರಕುಶಲತೆ, ಕಸೂತಿ ಮತ್ತು ಟೈಲರಿಂಗ್ ಮತ್ತು ಕಂಪ್ಯೂಟರ್ ಕೌಶಲ್ಯಗಳಲ್ಲಿ ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ವಿತರಿಸಿದ ಪ್ರಮಾಣ ಪತ್ರವು ಕೇವಲ ಅರ್ಹತೆಯನ್ನು ಪ್ರತಿನಿಧಿಸುವುದಿಲ್ಲ, ಅವರಲ್ಲಿ ಆತ್ಮ ವಿಶ್ವಾಸ, ಸ್ವಾವಲಂಬನೆ ಮತ್ತು ಹೊಸ ಆರಂಭದತ್ತ ದಿಟ್ಟ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ,” ಎಂದು ಹೇಳಿದರು.
“ಕೇಳಚಂದ್ರ ಫೌಂಡೇಶನ್‌ನ ಈ ಉಪಕ್ರಮವು ಮಹಿಳೆಯರಲ್ಲಿ ಕೌಶಲ್ಯಗಳನ್ನು ಪೋಷಿಸುವುದರ ಜತೆಗೆ ಅವರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಡುವುದಾಗಿದೆ. ಅಲ್ಲದೆ, ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಘನತೆಯನ್ನು ಸಾಧಿಸಲು ಅನುವು ಮಾಡಿಕೊಡುವ ಬದ್ಧತೆಯ ಕಾರ್ಯಕ್ರಮವಾಗಿದೆ. ತರಬೇತಿ ಪಡೆದ ಮಹಿಳೆಯರು ಸಬಲರಾಗಿ ತಮಗಾಗಿ, ತಮ್ಮ ಕುಟುಂಬಗಳು ಹಾಗೂ ಸಮುದಾಯಗಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಲು ಸಿದ್ಧರಾಗಿದ್ದಾರೆ,” ಎಂದು ತಿಳಿಸಿದರು.
“ತರಬೇತಿ ಪಡೆದಿರುವ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಸ್ವಾಲಂಬಿಗಳಾಗುವತ್ತ ನಿಮ್ಮ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಿಜವಾಗಿಯೂ ಸ್ಪೂರ್ತಿದಾಯಕ. ಈ ಮೈಲಿಗಲ್ಲು ನಿಮಗೆ ಸಾಕಷ್ಟು ಆರ್ಥಿಕ ಅವಕಾಶಗಳನ್ನು ಕಲ್ಪಿಸುವುದರ ಜತೆಗೆ ಯಶಸ್ಸಿನ ಬಾಗಿಲು ತೆರೆಯಲಿ,” ಎಂದು ಸುಜಾ ಜಾರ್ಜ್ ಹಾರೈಸಿದರು.
ಕೇಳಚಂದ್ರ ಫೌಂಡೇಶನ್‌ನ ನಿರ್ದೇಶಕಿ ಡಾ.ತಿವೇಣಿ ಅವರು ಮಾತನಾಡಿ, ಸರ್ವಜ್ಞನಗರ ಕ್ಷೇತದ ಮಹಿಳೆಯರಿಗೆ ಶಕ್ತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಸಚಿವ ಕೆ.ಜೆ.ಜಾರ್ಜ್ ಅವರು ಇಲ್ಲಿನ ಡಯಾಲಿಸಿಸ್ ಕೇಂದ್ರದಲ್ಲಿ ಕೌಶಲ್ಯ ತರಬೇತಿ ಕಂದ್ರ ಆರಂಭವಾಗುವಂತೆ ನೋಡಿಕೊಂಡರು. ಪಸ್ತುತ ಇಲ್ಲಿ ಸಾವಿರಾರು ಮಂದಿ ಡಯಾಲಿಸಿಸ್ ಸೌಲಭ್ಯ ಪಡೆಯುುದರೊಂದಿಗೆ ಕೌಶಲ್ಯ ತರಬೇತಿಯನ್ನೂ ತೆಗೆದುಕೊಳ್ಳುತ್ತಿದ್ದಾರೆ,” ಎಂದರು.
*15 ವರ್ಷದಲ್ಲಿ ನಂ. ಒನ್ ಕ್ಷೇತ್ರ*:
ವಾರ್ಡ್ ಅಧ್ಯಕ್ಷ ಎರನ್ ಸುರೇಶ್ ಮಾತನಾಡಿ, “ಕೌಶಲ್ಯ ಅಭಿವೃದ್ಧಿ, ಶಿಕ್ಷಣ ಕ್ಷೇತ್ರಕ್ಕೆ ಚಿವ ಕೆ.ಜೆ.ಜಾರ್ಜ್ ಅವರು ಗಣನೀಯ ಕೊಡುಗೆ ನೀಡಿದ್ದು, ಅವರ ಜನಪರ ಕಾಳಜಿಯಿಂದಾಗಿ ಸರ್ವಜ್ಞನಗರ ವಿಧಾಸಭಾ ಕ್ಷೇತ್ರವು ರಾಜ್ಯದ ಅನೇಕ ಕ್ಷೇತ್ರಗಳಿಂದ ಹತ್ತು ವರ್ಷದಷ್ಟು ಮುದುವರಿದಿದೆ. ಕ್ಷೇತ್ರದಲ್ಲಿ ಶಾಲೆಗೆ ಶಿಕ್ಷಕರು, ಮಕ್ಕಳ ಕೊರತೆ ಇಲ್ಲದಂತೆ ನೋಡಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರ ನೇತೃತ್ದಲ್ಲಿ ಇನ್ನು 15 ವರ್ಷದಲ್ಲಿ ಸರ್ವಜ್ಞನಗರ ಕ್ಷೇತ್ರವು ರಾಜ್ಯದಲ್ಲೇ ನಂಬರ್ ವನ್ ವಿಧಾಸಭಾ ಕ್ಷೇತ್ರವಾಗಿ ಹೊರಹೊಮ್ಮಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಸರ್ವಜ್ಞನಗರ ಕ್ಷೇತ್ರದ ನಾಗರಿಕರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಅವರಿಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶದಿಂದ ಕೇಳಚಂದ್ರ ಫೌಂಡೇಷನ್ ವತಿಯಿಂದ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಿ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದು ಪ್ರಮಾಣಪತ್ರ ಪಡೆದ ಎಲ್ಲರಿಗೂ ಅಭಿನದನೆಗಳು. ಭವಿಷ್ಯದಲ್ಲಿ ನಿಮ್ಮ ಯಶಸ್ಸುಇತರರಿಗೂ ಸ್ಪೂರ್ತಿಯಾಗಿ ಅವರೂ ಕೌಶಲ್ಯವಂತರಾಗಲಿ ಎಂದು ಹಾರೈಸುತ್ತೇನೆ.” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…