ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕ್ಷೇತ್ರದ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ವ್ಯಾಪ್ತಿಯಲ್ಲಿ ಗುರುವಾರ ಸಂಚರಿಸಿ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಅಭಿವೃದ್ದಿ ಕಾಮಗಾರಿಗಳ ಮಂದಗತಿಗೆ ಕಾರಣರಾದ ಅಧಿಕಾರಿಗಳಿಗೆ ಬೆವರಿಸಿಳಿಸಿದರು.

ಕೆ.ಜಿ.ಹಳ್ಳಿಯ ಪಿಳ್ಳಣ್ಣ ಗಾರ್ಡನ್‌ನಿಂದ ಶುರುವಾದ ಕ್ಷೇತ್ರ ಪರ್ಯಟನೆ ವಿನೋಬಾ ನಗರ, ಭಾರತ್ ಮಾತಾ ಬಡಾವಣೆ, ವೆಂಕಟೇಶಪುರ, ರಷದ್ ನಗರ ಹಾಗೂ ನಾಗವಾರ ಮುಖ್ಯರಸ್ತೆಯ ಮೆಟ್ರೋ ನಿಲ್ದಾಣದ ಬಳಿ ಕೊನೆಗೊಂಡಿತು.

ಪಿಳ್ಳಣ್ಣ ಗಾರ್ಡನ್‌ನ ಐದು ಬ್ಲಾಕ್‌ಗಳಲ್ಲಿ ಕಾಲ್ನಡಿಗೆಯಲ್ಲೇ ಸಂಚರಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ನವೀಕರಣ ಹಾಗೂ ಶುದ್ದ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿದರು. ವಿನೋಬಾ ನಗರ, ಭಾರತ್ ಮಾತಾ ಬಡಾವಣೆಯಲ್ಲೂ ಸ್ಥಳೀಯರು ನೀರಿನ ಸಮಸ್ಯೆ ಬಗೆಹರಿಸುವಂತೆ ಕೋರಿದರು.

ಈ ವೇಳೆ ಸ್ಥಳದಲ್ಲೇ ಹಾಜರಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳನ್ನು ಕರೆಸಿದ ಸಚಿವರು, ನೀವು ಸಬೂಬು ಹೇಳಬೇಡಿ. ಯಾವಾಗ ಶುದ್ದ ಕುಡಿಯುವ ನೀರಿನ ಸಂಪರ್ಕ ಕೊಡುತ್ತೀರಿ? ದಿನಾಂಕ ಸಹಿತ ಹೇಳಿ. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಚಿವರ ಕ್ಷೇತ್ರ ಪರ್ಯಟನೆ ಕುರಿತು ಮುಂಚಿತವಾಗಿ ಮಾಹಿತಿ ನೀಡಿದರೂ ಸ್ಥಳಕ್ಕೆ ಹಾಜರಾಗದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಯನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡ ಸಚಿವರು, ಮುಂದೆ ಈ ರೀತಿ ಮಾಡಿದೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

*ಮಹಿಳೆಯರಿಗೆ ಸ್ವಾವಲಂಬನೆಯೇ ಗುರಿಯಾಗಲಿ*

ಕೆ.ಜಿ.ಹಳ್ಳಿಯಲ್ಲಿ ಯುನೈಟೆಡ್-ವೇ ಬೆಂಗಳೂರು ಸಹಯೋಗದಲ್ಲಿ ಮೈತ್ರಿ ಸರ್ವ ಸೇವಾ ಸಮಿತಿ ನಡೆಸಿದ ಟೈಲರಿಂಗ್ ಕೌಶಲ್ಯ ತರಬೇತಿ ಮುಗಿಸಿದ 50 ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ಕೋರ್ಸ್ ಮುಗಿಸಿದವರಿಗೆ ಸಚಿವ ಕೆ.ಜೆ.ಜಾರ್ಜ್ ಪ್ರಮಾಣ ಪತ್ರಗಳನ್ನು ವಿತರಿಸಿದರು. ಅಲ್ಲದೆ, ಕೌಶಲ್ಯ ತರಬೇತಿ ಕುರಿತು ಹರ್ಷ ವ್ಯಕ್ತಪಡಿಸಿ, “ಮಹಿಳೆಯರು ಸ್ವಂತ ಉದ್ಯೋಗ ಮಾಡುತ್ತಾ ಸ್ವಾವಲಂಬಿಗಳಾದರೆ ಕುಟುಂಬ ಏಳಿಗೆ ಆಗುತ್ತದೆ. ಇದೇ ಯಶಸ್ಸಿನ ಗುಟ್ಟು,” ಎಂದು ಹೇಳಿ ತರಬೇತಿ ಪಡೆದವರಿಗೆ ಶುಭ ಹಾರೈಸಿದರು.

*ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ಅನುದಾನ’*

ವಿನೋಬಾ ನಗರದ ವೆಂಕಟೇಶಪುರದಲ್ಲಿನ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೂ ಓದುತ್ತಿರುವ 170 ಮಕ್ಕಳು, ಶಾಲೆ ಹಾಗೂ ಪಕ್ಕದ ಮಸೀದಿಯಲ್ಲೂ ಪಾಠ ಕೇಳುತ್ತಿದ್ದಾರೆ ಎಂಬ ವಿಚಾರ ತಿಳಿದ ಸಚಿವ ಜಾರ್ಜ್ ಅವರು, ಶಾಲೆಗೆ ಹೊಸ ಕಟ್ಟಡದ ಅವಶ್ಯಕತೆ ಇರುವುದನ್ನು ಮನಗಂಡು, ಶೀಘ್ರವೇ ಶಾಲಾ ಕಟ್ಟದ ನಿರ್ಮಾಣಕ್ಕೆ ಸೂಚನೆ ನೀಡಿದರು. ಅಲ್ಲದೆ, ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 90 ಲಕ್ಷ ರೂ. ಒದಗಿಸುವುದಾಗಿ ಘೋಷಿಸಿದರು.

ಎಂಬೆಸ್ಸಿ ಗಾಲ್ಫ್ ಲಿಂಕ್ಸ್ ಬಿಸಿನೆಸ್ ಪಾರ್ಕ್‌ನ ಸಿಎಸ್‌ಆರ್ ಅನುದಾನದಲ್ಲಿ ನಡೆಯುತ್ತಿರುವ ಭಾರತ್ ಮಾತಾ ಬಡಾವಣೆಯಲ್ಲಿನ ಅಂಗನವಾಡಿ ಕೇಂದ್ರಕ್ಕೆ ತೆರಳಿ ಪುಟ್ಟಮಕ್ಕಳಿಗೆ ಯಾವುದೇ ಸಮಸ್ಯೆಯಾಗದಂತೆ ನಡೆಸಲು ಅಗತ್ಯವಿರುವ ನೆರವು ನೀಡುವುದಾಗಿ ಭರವಸೆ ನೀಡಿದರು.

*ಮೆಟ್ರೋ ನಿಲ್ದಾಣ ಕಾಮಗಾರಿ ವೇಗಕ್ಕೂ ಸೂಚನೆ*

“ನಾನು ಬೆಂಗಳೂರು ಅಭಿವೃದ್ದಿ ಮಂತ್ರಿಯಾಗಿದ್ದಾಗ ಆರು ಎಕರೆ ಜಾಗ ನೀಡಿದ್ದೇನೆ. ಇಲ್ಲಿ ಸುಸಜ್ಜಿತ ಮೆಟ್ರೋ ನಿಲ್ದಾಣ ನಿರ್ಮಾಣವಾಗಬೇಕು ಸ್ಥಳೀಯ ಜನರಿಗೆ ಅನುಕೂಲ ಆಗಬೇಕು. ಇದೇ ನಮ್ಮ ಉದ್ದೇಶ. ಈಗ ಕ್ಷೇತ್ರದ ವೆಂಕಟೇಶಪುರ ಬಳಿ ಹಾಗೂ ನಾಗವಾರ ಮೆಟ್ರೋ ನಿಲ್ದಾಣಗಳ ಬಳಿ ನಡೆಯುತ್ತಿರುವ ರಸ್ತೆ, ಮಳೆ ನೀರಿನ ಚರಂಡಿ ಹಾಗೂ ಒಳಚರಂಡಿ ಕಾಮಗಾರಿಗಳನ್ನು ವೇಗವಾಗಿ ಮುಗಿಸಬೇಕು ಎಂದು ಸೂಚನೆ ನೀಡಿದರು.

ಮೆಟ್ರೋ ಕಾಮಗಾರಿಯಿಂದ ಹಾನಿಗೀಡಾದ ಮೂಲಸೌಕರ್ಯವನ್ನೂ ಸರಿಪಡಿಸುವಂತೆ ಸೂಚಿಸಿದ ಸಚಿವರು, ಕ್ಷೇತ್ರದ ರಸ್ತೆಗಳ ವೈಟ್‌ ಟಾಪಿಂಗ್ ಕಾಮಗಾರಿಯ ಮಾಹಿತಿ ಪಡೆದುಕೊಂಡು ಆದಷ್ಟು ಬೇಗ ಗುಣಮಟ್ಟದ ರಸ್ತೆ ಮಾಡುವಂತೆ ತಾಕೀತು ಮಾಡಿದರು.

ಸಚಿವ ಕೆ.ಜೆ.ಜಾರ್ಜ್ ಅವರ ಕ್ಷೇತ್ರ ಪರ್ಯಟನೆ ವೇಳೆ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಿಕೇಶಿ ಹಾಗೂ ಅಮರ್‌ನಾಥ್, ವಾರ್ಡ್ ಅಧ್ಯಕ್ಷರುಗಳು ಮತ್ತು ಜಿಬಿಎ, ಬಿಡಬ್ಲ್ಯೂಎಸ್‌ಎಸ್‌ಬಿ, ಬೆಸ್ಕಾಂ, ಕೆಪಿಟಿಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

3 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

15 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

15 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

23 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago