ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆಗೊಳಿಸಿದರು.
ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದರು.
ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ ಎಂದು ತಿಳಿಸಿದರು.
ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, ₹446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…