ಕೆ.ಹೆಚ್.ಮುನಿಯಪ್ಪ ಗೆಲುವನ್ನು ಸಂಭ್ರಮಿಸಿದ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು: ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಕಾಯಿ ಹೊಡೆದು ಹರಕೆ ತೀರಿಸಿ ಸಂಭ್ರಮ

 

2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿತ್ತು.

ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಿ‌ ನಂತರ ಗೋಪುರದ ಬಳಿ ಕೆ.ಎಚ್.ಮುನಿಯಪ್ಪ ಹೆಸರಲ್ಲಿ 1001 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ‌ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು.

ದಲಿತ ಸಿಎಂ ಅಥವಾ ಡಿಸಿಎಂ ಬೇಡಿಕೆ

ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ದಲಿತರಿದ್ದು, ಮುಂದುವರಿದ ಹಲವಾರು ಸಮುದಾಯಗಳು ಮತ್ತು ತೀರ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯಗಳಿಗೂ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ರಾಜ್ಯದ ಜನಸಂಖ್ಯೆಯ‌ ಶೇ.25ರಷ್ಟು ಇರುವ ದಲಿತ ಸಮುದಾಯಕ್ಕೆ ಈ ಬಾರಿ ಕಾಂಗ್ರೆಸ್ ಪಕ್ಷ ಕೆ.ಹೆಚ್.ಮುನಿಯಪ್ಪ ಅವರಿಗೆ ಸಿಎಂ ಅಥವಾ ಡಿಸಿಎಂ ಸ್ಥಾನವನ್ನು ನೀಡುವುದರ ಮೂಲಕ ಸಾಮಾಜಿಕ ನ್ಯಾಯ ಪಾಲಿಸಬೇಕು ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಜನಪ್ರತಿನಿಧಿಗಳಿಗೂ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಲ್ಲ. ಈ ಬಾರಿ ಕೆ.ಹೆಚ್.ಮುನಿಯಪ್ಪ ವಿಜಯ ಸಾಧಿಸಿರುವುದರಿಂದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಲಿದ್ದು, ಕ್ಷೇತ್ರಕ್ಕೆ ಮೊದಲ ಬಾರಿ ಸಚಿವ ಸ್ಥಾನ ಲಭಿಸುವ ಅವಕಾಶ ನಿಚ್ಚಳವಾಗಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳು, ಅಭಿವೃದ್ಧಿ ಕಾರ್ಯಗಳು ದೊರೆಯುವ ನಿರೀಕ್ಷೆಯಲ್ಲಿದ್ದೇವೆ ಎಂದರು.

ಈ ವೇಳೆ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ‌ ಎನ್.ರಂಗಪ್ಪ‌, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು,ಘಾಟಿ ಪಂಚಾಯ್ತಿ ಅಧ್ಯಕ್ಷೆ ಭಾರತೀಬಾಯಿ‌ ಪ್ರಸಾದ್, ಮುಖಂಡರಾದ ಗೋಪಾಲನಾಯ್ಕ್, ಆರ್.ವಿ.ಮಹೇಶ್, ರಾಮಕೃಷ್ಣಪ್ಪ, ಅರವಿಂದ್, ಕೃಷ್ಣನಾಯ್ಕ್, ಪ್ರಸಾದ್, ಶ್ರೀಧರ್, ವಸಂತಕುಮಾರ್, ಘಾಟಿ ಪಂಚಾಯ್ತಿ ಸದಸ್ಯ ಮುನಿರಾಜು ಇತರರು ಇದ್ದರು.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

4 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

6 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

7 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

16 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

18 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

1 day ago