ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯ- ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರಕಾರದೊಂದಿಗೆ ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಸರಕಾರವೇ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ ಮಂಜುನಾಥ್ ಮನವಿ ಮಾಡಿದರು

ತಾಲೂಕಿನ ದೊಡ್ಡಹಸಾಳ.ಬೆಗ್ಲಿಹೊಸಹಳ್ಳಿ, ಮುದುವತ್ತಿ ಹಾಗೂ ವಕ್ಕಲೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಪರವಾಗಿ ಪ್ರಚಾರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕೇವಲ ಹತ್ತು ತಿಂಗಳಲ್ಲಿ ಕೇಳಿದಷ್ಟು ಅನುದಾನವನ್ನು ರಾಜ್ಯ ಸರಕಾರದಿಂದ ಕೊಟ್ಟಿದ್ದಾರೆ ಇನ್ನೂ ನಾಲ್ಕು ವರ್ಷ ಕಾಂಗ್ರೆಸ್ ಸರಕಾರವೇ ಇದ್ದು ಹಂತಹಂತವಾಗಿ ಕ್ಷೇತ್ರವನ್ನು ಮಾದರಿಯಾಗಿ ಮಾಡಲಾಗುತ್ತದೆ ನಾನು ಆಗಲಿ ಕಾಂಗ್ರೆಸ್ ಸರಕಾರವಾಗಲಿ ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಹೋಗಲ್ಲ ನಿಮ್ಮ ಗ್ರಾಮಗಳಲ್ಲಿ ಆಗಬೇಕಾದ ಕಾಮಗಾರಿಗಳ ಪಟ್ಟಿ ಮಾಡಿ ಕೊಡಿ ಕೆಲಸ ಮಾಡುವ ಜವಾಬ್ದಾರಿಯನ್ನು ನಮಗೆ ಬಿಡಿ ಎಂದರು.

ಗ್ರಾಮಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದವರನ್ನು ಯಾರು ದೂಷಣೆ ಮಾಡುವುದು ಬೇಡ ರಾಜ್ಯ ಸರ್ಕಾರದಿಂದ ಸಾಮಾನ್ಯ ಜನತೆಯ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿಗಳನ್ನು ಜನಕ್ಕೆ ಮನವರಿಕೆ ಮಾಡಿಕೊಟ್ಟು ಅದರಿಂದ ಆಗುವ ಅನುಕೂಲಗಳು ಜೊತೆಗೆ ರಾಜ್ಯದ ಮಾದರಿಯಲ್ಲಿಯೇ ಕೇಂದ್ರದಲ್ಲಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತಷ್ಟು ಗ್ಯಾರಂಟಿಯನ್ನು ರೂಪಿಸಲಾಗಿದ್ದು ಎಂಬುದನ್ನು ಮನೆ ಮನೆಗೆ ತಿಳಿಸಿ ವೋಟ್ ಹಾಕುವಂತೆ ಮಾಡಬೇಕು ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೇವಲ ಆರು ತಿಂಗಳಲ್ಲಿ ಜಾರಿಗೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಪಕ್ಷ ಮತ್ತಷ್ಟು ಜನಪರ ಕಾರ್ಯಕ್ರಮ ಮಾಡಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಕನಿಷ್ಠ ಐದು ಸಾವಿರ ಬರುತ್ತಾ ಇದ್ದು ಧೈರ್ಯದಿಂದ ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ವೋಟು ಕೇಳಬಹುದು ರಾಜ್ಯದ ಜನರ ಸಂಕಷ್ಟವನ್ನು ಪರಿಹರಿಸುವುದು ಕಾಂಗ್ರೆಸ್ ಸರಕಾರದ ಗುರಿಯಾಗಿದೆ ಜಿಲ್ಲಾ ಕೇಂದ್ರದಲ್ಲಿ ರಿಂಗ್ ರೋಡ್, ಎಪಿಎಂಸಿ ಮಾರುಕಟ್ಟೆ, ಮೆಡಿಕಲ್ ಕಾಲೇಜ್ ಮಾಡಲಾಗುತ್ತದೆ ಜನರ ಜೀವನದ ಗುಣಮಟ್ಟ ಉತ್ತಮಪಡಿಸುವ ಗುರಿ ಹೊಂದಿರುವ ಕಾಂಗ್ರೆಸ್ ಸರ್ಕಾರದ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡಲು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀವು ಮತ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಛತ್ರಕೋಡಿಹಳ್ಳಿ ಮಂಜುನಾಥ್, ಶ್ರೀನಿವಾಸ್, ವೆಂಕಟೇಶ್,ಶ್ರೀರಾಮರೆಡ್ಡಿ ಮುಂತಾದವರು ಇದ್ದರು

Leave a Reply

Your email address will not be published. Required fields are marked *