ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.) ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ನೆರವೇರಿಸಿದರು.
ಬೆಂಗಳೂರಿನ ಸೆಂಟ್ರಲ್ ಡಿಟೆಕ್ಟಿವ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ (ಸಿಡಿಟಿಐ) ಸಂಸ್ಥೆಯನ್ನು, ಅರ್ಬನ್ ಪೊಲೀಸಿಂಗ್ (ಸ್ಮಾರ್ಟ್ ಸಿಟಿ ಪೊಲೀಸಿಂಗ್) ಹಾಗೂ ಬ್ಲಾಕ್ ಚೈನ್ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್‌ಗಳ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೋರ್ಸ್‌ಗಳನ್ನು ಒದಗಿಸಲಾಗುವುದು.
ಪೊಲೀಸ್ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಈ ಕೇಂದ್ರದ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್, ಬಿಪಿಆರ್‌ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…