ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಇಂದು ನವದೆಹಲಿಯ ಸಂಸತ್ ಭವನದಲ್ಲಿ ಭೇಟಿ ಮಾಡಿ ರಾಜ್ಯದ ಪಡಿತರ ವಿಚಾರಗಳು ಹಾಗೂ ಅಕ್ಕಿ ಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಖರೀದಿ ಏಜೆನ್ಸಿಗಳ ಬಾಕಿ ಉಳಿದಿರುವ ಅನುದಾನವನ್ನು ಬಿಡುಗಡೆಗೊಳಿಸಲು ಮನವಿ ಪತ್ರ ಸಲ್ಲಿಸಿದರು.
ಸಚಿವರೊಂದಿಗೆ ಸರ್ಕಾರದ ಕಾರ್ಯದರ್ಶಿಗಳಾದ ಜಿ.ಸಿ.ಪ್ರಕಾಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು