Categories: ರಾಜ್ಯ

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಅಮಿತ ಪ್ರಶ್ನೆಗಳು

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದಿದ್ದಾರೆ.

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು  ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ  ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ. ಯಾಕೆ ಕನ್ನಡಿಗರ ಹಸಿವು ಹಸಿವಲ್ಲವೇ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುಮಾರು 2.5 ಲಕ್ಷ ಹೆಕ್ಟೇರ್ ಜಮೀನಿಗೆ ನೀರುಣಿಸುವ ಭದ್ರ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿ ವರ್ಷಗಳೇ ಕಳೆದಿವೆ. ಆದರೆ ಈ ವರೆಗೆ ಒಂದೇ ಒಂದು ಪೈಸೆ ಅನುದಾನ ನೀಡಿಲ್ಲ.  ಕೃಷ್ಣಾ ,ಕಾವೇರಿ, ಮಹದಾಯಿ, ಮೇಕೆದಾಟು  ಸೇರಿದಂತೆ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಬಗ್ಗೆ ಇದೇ ರೀತಿಯ ನಿರ್ಲಕ್ಷ್ಯ ಯಾಕೆ? ಎಂದು ಕೇಳಿದ್ದಾರೆ.

ತೆರಿಗೆ ಸಂಗ್ರಹಿಸಿ ದೇಶದ ಬೊಕ್ಕಸಕ್ಕೆ ತುಂಬುವುದರಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಆದರೆ ಹದಿನೈದನೇ ಹಣಕಾಸು ಆಯೋಗ  ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.7ರಿಂದ ಶೇಕಡಾ 3.74ಕ್ಕೆ ಇಳಿಸಿದೆ. ಕನ್ನಡಿಗರ ಬೆವರಿನ ತೆರಿಗೆಯ ಮೇಲೆ ಯಾಕೆ ಕೇಂದ್ರ ಸರ್ಕಾರಕ್ಕೆ ಕೆಂಗಣ್ಣು? ಅತ್ತ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ, ಇತ್ತ ತಾರತಮ್ಯದಿಂದಾಗಿರುವ ನಷ್ಟ ತುಂಬುವ ವಿಶೇಷ ಅನುದಾನಕ್ಕೂ ಹಣಕಾಸು ಸಚಿವರಿಂದ ಕೊಕ್ಕೆ? ಇಂತಹ ಅನ್ಯಾಯ ಎಸಗಿ ಕರ್ನಾಟಕಕ್ಕೆ ಬಂದು ಕನ್ನಡಿಗರನ್ನು ಹೇಗೆ ಎದುರಿಸುತ್ತೀರಿ ಅಮಿತ್ ಶಹಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago