ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನ: ಡಾ.ಕೆ.ಸುಧಾಕರ್ ವಿರುದ್ಧ ಎಸ್.ಆರ್.ವಿಶ್ವನಾಥ್ ಮುನಿಸು ಅಂತ್ಯ

ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್  ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.

ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡು ಡಾ.ಕೆ.ಸುಧಾಕರ್ ವಿರುದ್ಧ  ವಿಶ್ವನಾಥ್ ಮುನಿಸಿಕೊಂಡಿದ್ದರು.

ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ‌ ಸಮಾವೇಶದ ಬಳಿಕ‌ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ‌ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ‌ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.

ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಮುನಿರಾಜ್, ಮಾಜಿ ಸಚಿವ ಶ್ರೀ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪ್ಥಿತರಿದ್ದರು.

Leave a Reply

Your email address will not be published. Required fields are marked *