ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಟಿ.ಟಿ.ಡಿ ಆಡಳಿತ ಮಂಡಳಿ ಸದಸ್ಯರಾದ ಎಸ್.ಆರ್.ವಿಶ್ವನಾಥ್ ಅವರ ಮನೆಗೆ ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ.ಕೆ.ಸುಧಾಕರ್ ಅವರು ಭೇಟಿ ನೀಡಿ ಲೋಕಸಭಾ ಚುನಾವಣೆ ಕುರಿತಂತೆ ಸಮಾಲೋಚನೆ ನಡೆಸಿ ಸಹಕಾರ ಕೋರಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಧಾನದ ಪರಿಣಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ನಡುವಿನ ಮುನಿಸು ಅಂತ್ಯವಾಗಿದೆ.
ಮಂಗಳವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ಬಳಿಕ ಅಮಿತ್ ಶಾ ಅವರು ಇಬ್ಬರೂ ನಾಯಕರಿಗೆ ಒಟ್ಟಾಗಿ ಚುನಾವಣೆ ಎದುರಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.
ವರಿಷ್ಠರ ಸೂಚನೆಯ ಬಳಿಕ ಬುಧವಾರ ಬೆಳಿಗ್ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸಿಂಗನಾಯಕನಗಳ್ಳಿ ನಿವಾಸಕ್ಕೆ ಆಗಮಿಸಿದ ಡಾ.ಕೆ.ಸುಧಾಕರ್ ಮಾತುಕತೆ ನಡೆಸಿದರು.
ವಿಶ್ವನಾಥ್ ಅವರ ಮನೆಯಲ್ಲೇ ಉಪಾಹಾರ ಸೇವಿಸಿ ನಾಮಪತ್ರ ಸಲ್ಲಿಕೆಗೆ ಆಗಮಿಸುವಂತೆ ಮನವಿ ಮಾಡಿದರು.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…