ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರಿಗೆ ಸಲ್ಲಿಸಿರುವ ಬೇಡಿಕೆ ಪತ್ರದ ವಿವರ ಇಲ್ಲಿದೆ ಓದಿ…
ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.
ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.
ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…