ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡುಗೆ ಮನವಿ ಪತ್ರ ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ;

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.

ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

5 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

14 hours ago