ಕೋಲಾರ: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಬಜೆಟ್ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ನಾಡಿನ ಅನ್ನದಾತನ ಸಬಲೀಕರಣದೊಂದಿಗೆ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾದ ಬಜೆಟ್ ಆಗಿದೆ ಎಂದು ಜೆಡಿಎಸ್ ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಸಂತಸ ವ್ಯಕ್ತಪಡಿಸಿದರು
ಕೇಂದ್ರ ಬಜೆಟ್ ಕುರಿತು ಪತ್ರಕಾ ಹೇಳಿಕೆ ನೀಡಿದ ಅವರು ಬಜೆಟ್ನಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ವಿಕಸಿತ ಭಾರತದ ಗುರಿಯನ್ನು ಸಾಧಿಸಲು ಪೂರಕವಾದ ಅಂಶಗಳಿಗೆ ಒತ್ತು ನೀಡಲಾಗಿದೆ ಈ ಸಾಲಿನ ಬಜೆಟ್ನಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ೪ ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಒದಗಿಸುವ ಭರವಸೆಯನ್ನು ನೀಡಲಾಗಿದೆ ಕೃಷಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಮಾನವ ಸಂಪನ್ಮೂಲಗಳ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆ ಆವಿಷ್ಕಾರ ಸಂಶೋಧನೆ ಅಭಿವೃದ್ಧಿ, ಮುಂದಿನ ಪೀಳಿಗೆಗೆ ಆದ್ಯತೆ, ಎಂಎಸ್ಎಂಇ ಗಳಿಗೆ ಒತ್ತು ಸೇರಿದಂತೆ ೯ ವಲಯಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಯೋಜನೆಗಳಿಗೆ ಅಧ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ದೇಶದ ಬೆನ್ನೆಲುಬಾದ ಅನ್ನದಾತನ ನೆರವಿಗಾಗಿ ಬಜೆಟ್ನಲ್ಲಿ ಹಲವು ಕಲ್ಯಾಣ ಯೋಜನೆ ಜಾರಿಯ ಭರವಸೆ ನೀಡಲಾಗಿದ್ದು, ಕೃಷಿ ಕ್ಷೇತ್ರಕ್ಕೆ ೧.೫೨ ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಿ ಕೃಷಿಯ ಸರ್ವಾಂಗೀಣ ಅಭಿವೃದ್ಧಿಯ ಬದ್ಧತೆಯನ್ನು ಬಜೆಟ್ನಲ್ಲಿ ವ್ಯಕ್ತಪಡಿಸಲಾಗಿದೆ ಮೂರು ಕೌಶಲ್ಯ ಯೋಜನೆಗಳನ್ನು ಪ್ರಕಟಿಸಲಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ವಸತಿ ಕ್ಷೇತ್ರಕ್ಕೂ ಬಜೆಟ್ನಲ್ಲಿ ಒತ್ತು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಅವಾಜ್ ಯೋಜನೆಯಡಿ ೩ ಕೋಟಿ ಮನೆ ನಿರ್ಮಾಣದ ಪ್ರಸ್ತಾವವನ್ನು ಬಜೆಟ್ ನಲ್ಲಿ ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಯಲುವಗುಳಿ ನಾಗರಾಜ್ ತಿಳಿಸಿದರು.