ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲನೆ ಮಾಡುತ್ತಿದೆ.

ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೊದಲಿಗೆ ವಿಶ್ವನಾಥಪುರ ಬಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆಹಾನಿಯನ್ನು ವೀಕ್ಷಿಸಿದರು.

ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡರು. ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದರು.

ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಯ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ತಂಡದಲ್ಲಿದ್ದಾರೆ.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago