ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರಧಾನಿ ಮೋದಿ ಅವರನ್ನು ಆಗ್ರಹಪಡಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೆ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ.
ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ.
ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ.
ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…