ಕೇಂದ್ರ ಸರ್ಕಾರದಿಂದ ವೈಜ್ಞಾನಿಕ, ಪಾರದರ್ಶಕ ಜಾತಿಗಣತಿ ನಡೆಯಲಿದೆ- ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್

ರಾಷ್ಟ್ರೀಯ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಕೂಡ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರಕ್ಕೆ ಕರ್ನಾಟಕದಲ್ಲಿ ಬಹುತೇಕ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತಿವೆ.

ಸಾಮಾಜಿಕ-ಆರ್ಥಿಕ ಅಂಶಗಳನ್ನು ಒಳಗೊಂಡ ಗಣತಿಯ ಅಗತ್ಯವನ್ನು ಕಾಂಗ್ರೆಸ್ ನಾಯಕರು ಒತ್ತಿ ಹೇಳಿದರೆ, ಬಿಜೆಪಿ ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ವಿಷಯದಲ್ಲಿ ತೀವ್ರವಾದ ರಾಜಕೀಯ ವಾಗ್ವಾದಗಳು ನಡೆಯುತ್ತಿವೆ. ಜಾತಿ ಗಣತಿಯ ಪಾರದರ್ಶಕತೆ ಮತ್ತು ಅದರ ಅನುಷ್ಠಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಈ ಕುರಿತು ನಗರದಲ್ಲಿನ ಜಿಲ್ಲಾ ಬಿಜೆಪಿ‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಾತನಾಡಿ, ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇವೆ. ಕೇಂದ್ರ ಸರ್ಕಾರದಿಂದ ವೈಜ್ಞಾನಿಕ ಗಣತಿ ನಡೆಯಲಿದೆ. ಕಾಂಗ್ರೆಸ್ ಯಾವತ್ತೂ ಜಾತಿಗಣತಿ ಮಾಡಲು ಯತ್ನಿಸಿಲ್ಲ. ಈಗ ಪ್ರಧಾನಿ ಮೋದಿ ಸಂಪುಟ ತೀರ್ಮಾನ ಮಾಡಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಜಾತಿಗಣತಿ ಬಹಳ ಗೊಂದಲ ಆಗಿತ್ತು. ರಾಜ್ಯ ಸರ್ಕಾರ ಕದ್ದುಮುಚ್ಚಿ ಜಾತಿಗಣತಿಯನ್ನ ಮಾಡಿತ್ತು. ಎಲ್ಲ ಜಾತಿಗಳ ಗಣತಿ ಮಾಡಿಲ್ಲ ಎಂದು ದೂರು ಬಂದಿತ್ತು. ಆದ್ದರಿಂದ ಕೇಂದ್ರ ಸರ್ಕಾರ ವೈಜ್ಞಾನಿಕ, ಸ್ಪಷ್ಟವಾಗಿ ಜಾತಿ ಸಮೀಕ್ಷೆ ಮಾಡುತ್ತೆ ಎಂದರು.

ಭಾರತದಲ್ಲಿಜಾತಿಗಣತಿಗೆ ಶತಮಾನಗಳ ಇತಿಹಾಸವಿದೆ. ದೇಶದಲ್ಲಿ ಮೊದಲ ಬಾರಿಗೆ 1891ರಲ್ಲಿ ಜಾತಿಗಣತಿ ಮಾಡಲಾಯಿತು. ಇದಾದ ಬಳಿಕ ಬ್ರಿಟಿಷರು 10 ವರ್ಷಕ್ಕೊಮ್ಮೆ ಜಾತಿಗಣತಿ ನಡೆಸಿದರು. 1931 ರವರೆಗೂ ಜಾತಿಗಣತಿ ಮುಂದುವರಿಯಿತು. ಆದರೆ, ಅದೇ ವರ್ಷ ಜಾತಿಗಣತಿಯನ್ನು ರದ್ದುಪಡಿಸಲಾಯಿತು. ಭಾರತದಲ್ಲಿ 1931ರಿಂದ ಇದುವರೆಗೆ ಜಾತಿವಾರು ಸಮೀಕ್ಷೆ ಅಥವಾ ಗಣತಿ ಮಾಡಿಲ್ಲ. ಜನಗಣತಿ ವೇಳೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಹೊರತುಪಡಿಸಿ 1931ರಿಂದ ಬೇರೆ ಸಮುದಾಯದವರ ಜಾತಿ ಕುರಿತ ಮಾಹಿತಿಯನ್ನು ಸಂಗ್ರಹಿಸಿಲ್ಲ ಎಂದರು.

ಜಾತಿಗಣತಿಯಿಂದ ತಳ ಸಮುದಾಯದವರಿಗೂ ಮೀಸಲು ಹಾಗೂ ಸರಕಾರದ ಯೋಜನೆ ನೀಡಲು ಸಾಧ್ಯ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿಖರವಾಗಿ ತಿಳಿದು, ಸಮಾನ ಅವಕಾಶ ನೀಡುವುದು ಜಾತಿ, ಒಳಜಾತಿಗಳಲ್ಲೇ ಇರುವ ಅಸಮಾನತೆ, ಕೆಲವೇ ಜಾತಿಗೆ ಸೌಕರ್ಯಗಳು ಸೀಮಿತವಾಗಿರುವುದನ್ನು ತಡೆಯಬಹುದು ಎಂದು ತಿಳಿಸಿದರು.

ಈ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ್, ಬಿಜೆಪಿ ಮಹಿಳಾ ಮೋರ್ಚಾ ಮಾಜಿ ರಾಜ್ಯ ಕಾರ್ಯದರ್ಶಿ ಕು.ನಿಶ್ವಿತಾ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಎಚ್.ರಾಮಕೃಷ್ಣಪ್ಪ, ಮಂಜುನಾಥ್ ಸೇರಿದಂತೆ ಇತರರು‌ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

3 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

4 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

5 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

9 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

10 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

10 hours ago