ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.
– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.
– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.
– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.
– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.
– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.
– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.
– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.
– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.
– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!
ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…