ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆ- ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಮಾತನಾಡಬೇಕಿರುವುದು, ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ‌ ಹಾಗೂ ಐಟಿ ಬಿಟಿ‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

– ಕಳೆದ ಒಂದು ವರ್ಷದಲ್ಲಿ ಒಂದು ಸಾಮಾನ್ಯ ಸಸ್ಯಾಹಾರಿ ಊಟದ ಬೆಲೆ 57%ನಷ್ಟು ದುಬಾರಿಯಾಗಿದೆ.

– ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ.

– ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ ₹36.58 ಲಕ್ಷ ಕೋಟಿ ಸಂಗ್ರಹಿಸಿದೆ ಕೇಂದ್ರ ಸರ್ಕಾರ.

– ಆರೋಗ್ಯ ಕ್ಷೇತ್ರದ ಹಣದುಬ್ಬರ 14% ಹೆಚ್ಚಿದೆ, ಸಾಮಾನ್ಯ ಔಷಧಗಳ ಬೆಲೆಯೂ ಅಧಿಕವಾಗಿ ಹೆಚ್ಚಳವಾಗಿದೆ.

– ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ.

– ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ.

– 2018ರಿಂದ 2024ರವರೆಗೆ ಕನಿಷ್ಠ ಠೇವಣಿ ನಿರ್ವಹಿಸದ ದಂಡವಾಗಿ ಬಡ ಜನರಿಂದ 43,500 ಕೋಟಿ ಹಣ ಲೂಟಿಗೈದಿದೆ.

– ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ.

– 100 ಕೋಟಿಗೂ ಅಧಿಕ ಭಾರತೀಯರಿಗೆ ಅಗತ್ಯ ಸೇವೆಗಳಿಗೆ ಖರ್ಚು ಮಾಡಲಾಗದಷ್ಟು ಖರೀದಿ ಸಾಮರ್ಥ್ಯ ಕುಸಿದಿದೆ ಎಂದು ಬ್ಲೂಮ್ ವರದಿ ಮಾಡಿದೆ.

– ಟೋಲ್ ದರ ಏರಿಕೆಯು ಭಾರತೀಯರನ್ನು ಕಂಗಾಲಾಗಿಸಿದೆ, ಗ್ಯಾಸ್ ಸಿಲಿಂಡರ್ ದರ ಜನರನ್ನು ಒಲೆ ಹಚ್ಚದೆಯೇ ಸುಡುತ್ತಿದೆ!

ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ, ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ. ರಾಜ್ಯ ಬಿಜೆಪಿ ನಾಯಕರು ಜನರ ಎದೆಗೆ ಕಿವಿಗೊಟ್ಟರೆ ಆ ಆಕ್ರೋಶ ಕೇಳಿಸಲಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

21 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago