Categories: ಕೋಲಾರ

ಕೇಂದ್ರ ಸರ್ಕಾರದ ವಿರುದ್ದ ಫೆ 12 ರಂದು ಅಖಿಲ ಭಾರತ ಮುಷ್ಕರ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ನರೇಗಾ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು ಎಲ್ಲಾ ದುಡಿಯುವ ವರ್ಗದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ– ಕರ್ನಾಟಕ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್‌ ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಭೂಸ್ವಾಧೀನ ಕಾಯ್ದೆಗಳನ್ನು ಹಿಂಪಡೆಯಬೇಕು ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ದ್ರೋಹ ಬಗೆದಿದೆ. ಕಾರ್ಮಿಕ ವಿರೋಧಿಯಾಗಿರುವ ಈ ಕರಡು ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ದೇಶಾದ್ಯಂತ ಕಾರ್ಮಿಕರ ಕಾಯ್ದೆಗಳು ದುಡಿಯುವ ವರ್ಗಕ್ಕೆ ವಿರುದ್ಧವಾಗಿದೆ ದೇಶದ ಸಂಪತ್ತಿನ ಸಂರಕ್ಷಣೆ, ದುಡಿಯುವ ಜನರ ಹಕ್ಕುಗಳ ರಕ್ಷಣೆ ಮತ್ತು ಮಾನವ ವಿರೋಧಿ ನೀತಿಗಳ ವಿರುದ್ಧ ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದೆ. ಈ ಮುಷ್ಕರವನ್ನು ಉತ್ಪಾದನೆ ಸೇವೆ ಸ್ಥಗಿತಗೊಳಿಸುವ ಮೂಲಕ ಕಾರ್ಮಿಕರು, ರೈತರು, ಯುವ ಸಮುದಾಯ ಮಹಿಳಾ ಸಂಘಟನೆಗಳು, ವಿಧ್ಯಾರ್ಥಿಗಳು ಹಾಗೂ ಎಲ್ಲಾ ದುಡಿಯುವ ವರ್ಗದ ಜನ ತಮ್ಮ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಮುಷ್ಕರಕ್ಕೆ ಬೆಂಬಲ ನೀಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಮತ್ತು ಸಂಯುಕ್ತ ಹೋರಾಟದ ಪರವಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಕೇಂದ್ರದ ಕಾರ್ಮಿಕರ ನೀತಿಗಳಿಂದ ನೇರವಾದ ಹೊಡೆತ ಸ್ಥಳೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಬೀಳಲಿದೆ ಸರ್ಕಾರ ಕಾರ್ಮಿಕರ ಹಿತ ಕಾಪಾಡುವ ಬದಲಿಗೆ ಬಂಡವಾಳಶಾಹಿಗಳ ಹಿತ ಮುಖ್ಯವಾಗಿದೆ ಈ ಮಸೂದೆಗಳು ವಾಪಸು ಪಡೆಯಲು ನಡೆಯಲಿರುವ ಮುಷ್ಕರವು ಕೋಲಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ ಸ್ಥಳೀಯ ಕೈಗಾರಿಕೆಗಳಲ್ಲಿ ನಡೆಯಲಿದೆ ನಗರದಲ್ಲಿ ಗಾಂಧಿವನದಿಂದ ಬೃಹತ್ ಮೆರವಣಿಗೆ ನಡೆದು ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಷ್ಕರವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಖಜಾಂಚಿ ಹೆಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್, ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ವಿ.ನಾರಾಯಣರೆಡ್ಡಿ, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನ್ನೆಹೊಸಹಳ್ಳಿ ರಮೇಶ್, ಸಿಐಟಿಯು ಸಹ ಕಾರ್ಯದರ್ಶಿ ಹರೀಷ್, ಕೇಶವರಾವ್ ಇದ್ದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

7 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

19 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

20 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

20 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago