ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು- ಕನ್ನಡ ಪಕ್ಷದ ಮುಖಂಡ ಸಂಜೀವ್ ನಾಯಕ ಒತ್ತಾಯ

ಕೇಂದ್ರ ಸರ್ಕಾರದ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಒಪ್ಪಿಗೆ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿಯೂ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರಗಳು ರಾಜಕೀಯ ಮಾಡುತ್ತಿವೆ. ಇದನ್ನು ಕನ್ನಡಿಗರು ಪ್ರತಿಭಟಿಸಬೇಕು ಕನ್ನಡಿಗರು ಇಂದು ನಮ್ಮ ಹಕ್ಕಿಗಾಗಿ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕೇಂದ್ರ ಸರಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ನಮ್ಮ ಸಂಸದರು ಧ್ವನಿ ಎತ್ತಬೇಕು. ಸರಕಾರ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸದಿದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಕನ್ನಡ ಪಕ್ಷದ ಮುಖಂಡರಾದ ಸಂಜೀವ್ ನಾಯಕ ಅವರು ಎಚ್ಚರಿಕೆ ನೀಡಿದರು.

ನಗರದ ಅಂಚೆ ಕಚೇರಿಯ ಆವರಣದಲ್ಲಿ ಕನ್ನಡ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಡೆದ  ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು‌.

ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಾ ಬಂದಿದೆ. ಇದರಿಂದ ರಾಜ್ಯದ ಭಾಷೆ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯುಂಟಾಗಿತ್ತಿದೆ. ಕೇಂದ್ರ ಸರಕಾರಿದಿಂದ  ಕನ್ನಡ ಭಾಷೆಯನ್ನು ನಿಷ್ಕ್ರಿಯಗೊಳಿಸುವ ಹುನ್ನಾರ ನಡೆಯುತ್ತಿದೆ. ಕನ್ನಡಿಗರೇ ಸ್ಥಾಪಿಸಿ ಬೆಳೆಸಿದ ಬ್ಯಾಂಕ್ ಗಳನ್ನು  ವಿಲೀನಗೊಳಿಸಿ ರಾಜ್ಯಕ್ಕೆ ಅನ್ಯಾಯ ಎಸೆಯಲಾಗಿದೆ. ಒಂದೇ ಭಾಷೆ ಒಂದೇ ದೇಶ ಎಂಬ ಕಲ್ಪನೆ ಅಡಿಯಲ್ಲಿ  ಕೇಂದ್ರ ಸರಕಾರ ಪ್ರಾದೇಶಿಕ ಭಾಷೆಗಳನ್ನು ಕಡೆಗಣಿಸುತ್ತಾ ಬಂದಿದೆ ಈ ಬಗ್ಗೆ ನಾಗರಿಕರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕನ್ನಡಿಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದರು.

ಈ ವೇಳೆ ಕನ್ನಡ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಪಿ ಆಂಜನೇಯ, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾ.ಗೌ.ಅಧ್ಯಕ್ಷ ರಂಗನಾಥ್, ತಾ. ಅಧ್ಯಕ್ಷ. ಡಿ.ವೆಂಕಟೇಶ್, ತಾ.ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಕರವೇ ಪ್ರವೀಣ್ ಶೆಟ್ಟಿ ಬಳಗದ ವೆಂಕಟೇಶ್, ಕನ್ನಡ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ನಂಜಪ್ಪ, ಛಲವಾದ ಮಹಾಸಭದ ಗುರುರಾಜು ಪ್ರಜಾವಿಮೋಚನಾ ಚಳುವಳಿಯ ಗುಳ್ಯಹನುಮಣ್ಣ, ಶಿವರಾಜಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!