Categories: ಹಾವೇರಿ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ.‌ ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಕ್ರಾಂತಿಕಾರಿ ಪ್ರಗತಿ ಆಗಿದೆ.‌ GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನುಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದು ಹೇಳಿದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರಿಗೆ ತಲುಪಿಸಿದ್ದೇವೆ ಎಂದು ತಿಳಿಸಿದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸದಾಭಿಪ್ರಾಯ ವ್ಯಕ್ತಪಡಿಸಿವೆ. ಹೀಗಿದ್ದರೂ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತೆ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆಯಿರಿಸಿದ್ದೇವೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಈಗ ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನೆಯೇ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

6 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

6 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

7 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

13 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

15 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

18 hours ago