ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.
ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…