Categories: ರಾಜ್ಯ

ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ- ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದ್ದಾರೆ.

ದೇವದುರ್ಗದಲ್ಲಿ ಮಾಧ್ಯಮದವರೊಂದಿಗೆ ಈ ಕುರಿತು ಅವರು ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾನಾಗಲಿ, ಯತೀಂದ್ರ ಆಗಲಿ ಈ ರೀತಿ  ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲುತ್ತೇನೆ ಎಂದು ಹೆದರಿಕೆ ಶುರುವಾಗಿದೆ ಹಾಗಾಗಿ ಏನೇನೋ ಹೇಳಿಕೆ ನೀಡುತ್ತಾರೆ. ಇವೆಲ್ಲ ಊಹಾಪೋಹಗಳು ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.

ನಗರಾಭಿವೃದ್ಧಿ ಸಚಿವ ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ. ಕ್ಷೇತ್ರದಲ್ಲಿ ಶಾಸಕರು, ಮಾಜಿ ಶಾಸಕರು, ಸಂಸದರು, ಅಭ್ಯರ್ಥಿಯಾಗಿದ್ದವರು, ಬ್ಲಾಕ್ ಸಮಿತಿ ಅಧ್ಯಕ್ಷ, ಜಿಲ್ಲಾಧ್ಯಕ್ಷರು, ಪ್ರಮುಖ ಕಾರ್ಯಕರ್ತರ ಅಭಿಪ್ರಾಯ ಪಡೆದು ಅವರು ಹೇಳಿದವರಿಗೆ ಟಿಕೇಟ್ ನೀಡಲಾಗುವುದು ಎಂದರು.

ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು. 22ರಂದು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಲು ಹೊರಟಿದ್ದಾರೆ. ಅದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನ ವಿರೋಧಿಗಳಲ್ಲ. ನಾನು ಎಲ್ಲಿಯೂ ಅಯೋಧ್ಯೆಗೆ ಹೋಗುತ್ತೇನೆ ಅಥವಾ ಹೋಗುವುದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗೃಹ ಲಕ್ಷ್ಮೀ ಯೋಜನೆಯಡಿ ಕೊಡುವ 2,000 ರೂ.ಯಾವುದಕ್ಕೂ ಸಾಲುವುದಿಲ್ಲ ಎಂದಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

7 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

12 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

15 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago