ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ದೊಡ್ಡಬೆಳವಂಗಲ ಹೋಬಳಿಯ ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಅಪ್ಪಕಾರನಹಳ್ಳಿ ಗ್ರಾಮದ ಮುನಿರಾಜು (41) ಎಂದು ಗುರುತಿಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ

ಮಂಜುನಾಥ ಹಲವು ವರ್ಷಗಳಿಂದ ಅಪ್ಪಕಾರನಹಳ್ಳಿ ಗೇಟ್ ಬಳಿ ಕಾಫಿ-ಟೀ ಅಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿಯಾದ ಮುನಿರಾಜು ಅಂಗಡಿಗೆ ನಿಯಮಿತವಾಗಿ ಬಂದು ಗ್ರಾಹಕನಾಗಿದ್ದನು. ಆರೋಪಿ ಮುನಿರಾಜು ಟೀ, ಕಾಫಿ ಅಂಗಡಿ ಮಂಜುನಾಥನ ಬಳಿ 200 ರೂಪಾಯಿ ಸಾಲ ಪಡೆದಿದ್ದ ಎನ್ನಲಾಗಿದೆ.

ಮೇ 12ರಂದು ಅಂಗಡಿಗೆ ಬಂದ ಮುನಿರಾಜುವಿಗೆ ಬಾಕಿಯಿದ್ದ ಹಣವನ್ನು ನೀಡುವಂತೆ ಮಂಜುನಾಥ ಕೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಮುನಿರಾಜು, “ಇಲ್ಲಿ ಹೇಗೆ ಅಂಗಡಿ ನಡೆಸುತ್ತೀಯಾ, ನಿನ್ನನ್ನು ಇಂದು ಉಳಿಸಲಾರೆ” ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾನೆ.

ಬಳಿಕ ಅಂಗಡಿಯ ಹಿಂಭಾಗದಲ್ಲಿದ್ದ ನೀಲಗಿರಿ ತೋಪಿನಿಂದ ದೊಣ್ಣೆ ತಂದು ಮಂಜುನಾಥನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ.

ಗಂಭೀರವಾಗಿ ಗಾಯಗೊಂಡ ಮಂಜುನಾಥನನ್ನು ತಕ್ಷಣ ದಾಬಸ್ ಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಾಲ್ಕು ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

2 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

23 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago