ಕೋಲಾರ: ರಾಜ್ಯ ಸರ್ಕಾರವು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡಲಿದ್ದು ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರವು ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ಬಳಕೆಯಾಗುವಂತಾಗಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಮಹೇಂದ್ರ ಏರೋಸ್ಪೇಸ್ ಕಂಪನಿಯಲ್ಲಿ ಸೋಮವಾರ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಸರ್ಕಾರೇತರ ಸಂಸ್ಥೆಗಳು ಸಹ ಕೈ ಜೋಡಿಸಬೇಕು ತಮ್ಮ ಸಿಎಸ್ಆರ್ ಅನುದಾನವನ್ನು ಶಿಕ್ಷಣದ ಕೌಶಲ್ಯಾಭಿವೃದ್ಧಿಗೆ ಬಳಕೆ ಮಾಡಬೇಕಿದೆ ಸಾಮಾಜಿಕ ಹೊಣೆಗಾರಿಕೆಗೆ ಬಳಕೆ ಮಾಡಬೇಕೆಂದು ಸರಕಾರವು ನಿರ್ದೇಶಿಸಲಾಗಿದೆ. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಬಳಕೆಯಾಗುತ್ತಿದೆ. ಮತ್ತಷ್ಟು ಸಂಸ್ಥೆಗಳು ಸರ್ಕಾರಿ ಶಾಲೆಗಳ ಸುಧಾರಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಕೈಗಾರಿಕಾ ಪ್ರದೇಶಗಳನ್ನು ಗುರುತಿಸಲಾಗುತ್ತಿದೆ ಈ ಭಾಗದಲ್ಲಿಯೂ ಸಹ ಕೈಗಾರಿಕಾ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಿದ್ದೇವೆ ಇಲ್ಲಿನ ಕಂಪನಿಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಅವಕಾಶಗಳು ನೀಡಬೇಕು ಕಂಪನಿಯು ಉದ್ಯೋಗಿಗಳನ್ನು ನೇಮಿಸಿಕೊಳ್ಳುವಾಗ ಸ್ಥಳೀಯರಿಗೆ ಆದ್ಯತೆಯ ಮಾನದಂಡ ಅನುಸರಿಸಬೇಕು ನಿಮಗೆ ಅಗತ್ಯವಿರುವ ತಂತ್ರಜ್ಞರನ್ನು ಬೇಕಾದರೆ ಹೊರಗಿನಿಂದ ಕರೆತನ್ನಿ. ಉಳಿದ ಉದ್ಯೋಗಳಿಗೆ ಸ್ಥಳೀಯರನ್ನೇ ಆಯ್ಕೆ ಮಾಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಮಹೇಂದ್ರ ಏರೋಸ್ಪೇಸ್ ಮುಂಬೈ ವಿಭಾಗೀಯ ಮುಖ್ಯಸ್ಥ ವಿಜಯನಾಯರ್, ಸಿಒಒ ಕಾರ್ತಿಕ್ ಕೃಷ್ಣಮೂರ್ತಿ, ಕೇಂದ್ರದ ಮುಖ್ಯಸ್ಥ ನರೇಂದ್ರ ಶ್ಯಾನಬೋಗ್, ಕಂಪನಿಯ ಹೆಚ್.ಆರ್ ನಾಗರಾಜ್,ಶ್ರೀರಾಮ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ಮುಖಂಡರಾದ ಬೆಳ್ಳೂರು ಅಶ್ವಥ್, ಮೈಲಾಂಡಹಳ್ಳಿ ಮುರಳಿ, ಜನಪನಹಳ್ಳಿ ನವೀನ್ ಕುಮಾರ್ ಮುಂತಾದವರು ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…