
ರಾಜ್ಯ ಸರ್ಕಾರವು 2025-26ನೇ ಸಾಲಿಗೆ ನೇಕಾರರ ವಿಶೇಷ ಪ್ಯಾಕೆಜ್ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತೀ ಸಣ್ಣ (SME) ಕೈಮಗ್ಗ ಘಟಕಗಳ ಸ್ಥಾಪನೆಗೆ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾವಿ ಉದ್ದಿಮೆದಾರರು ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ ಕಚೇರಿಗೆ ಭೇಟಿ ನೀಡಿ ಅಥವಾ ಕಚೇರಿಯ ದೂರವಾಣಿ ಸಂಖ್ಯೆ: 080-22860495 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.