ಕೈಮಗ್ಗ ಮತ್ತು ಜವಳಿ ಇಲಾಖೆ: ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

2023-24 ನೇ ಸಾಲಿನ ಆಯವ್ಯಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖಾ ವತಿಯಿಂದ ನೇಕಾರರಿಗೆ ನೀಡಲು ಹಾಗೂ ನಿರಂತರ ನೇಯ್ಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ಯೋಜನೆಗಳಾದ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ, ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ 02 ವಿದ್ಯುತ್‌ ಮಗ್ಗ ಘಟಕ ಸ್ಥಾಪನೆ ಹಾಗೂ ಹೊಸ ಎಲೆಕ್ಟ್ರಾನಿಕ್ – ಜಕಾರ್ಡ್ ಖರೀದಿ ಮುಂತಾದ ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖಾ ವತಿಯಿಂದ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಮಿಸಲಾತಿಯನ್ವಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಫಲಾನುಭವಿಯು ಬ್ಯಾಂಕಿನಲ್ಲಿ ಸಾಲ ಪಡೆದು ಘಟಕವನ್ನು ಸ್ಥಾಪಿಸಿದ ನಂತರ ಅರ್ಹತೆಯನುಸಾರ ಕೇಂದ್ರ ಕಛೇರಿಯಿಂದ ಮಂಜೂರಾದ ಭೌತಿಕ ಹಾಗೂ ಆರ್ಥಿಕ ಗುರಿಗೆ ಒಳಪಟ್ಟು ಮರುಪಾವತಿ ಆಧಾರದ ಮೇಲೆ ಸಹಾಯಧನ ಮಂಜೂರು ಮಾಡಲಾಗುವುದು.

ಫಲಾನುಭವಿಯು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ವೆಬ್‌ಸೈಟ್: njn.karnatakadht.org ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಆಪರೇಲ್ ಪಾರ್ಕ್ ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಭೇಟಿ ನೀಡಿ ಅಥವಾ ದೊರವಾಣಿ ಸಂಖ್ಯೆ 080-29501945 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *