2023-24 ನೇ ಸಾಲಿನ ಆಯವ್ಯಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖಾ ವತಿಯಿಂದ ನೇಕಾರರಿಗೆ ನೀಡಲು ಹಾಗೂ ನಿರಂತರ ನೇಯ್ಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ಯೋಜನೆಗಳಾದ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆ, ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ 02 ವಿದ್ಯುತ್ ಮಗ್ಗ ಘಟಕ ಸ್ಥಾಪನೆ ಹಾಗೂ ಹೊಸ ಎಲೆಕ್ಟ್ರಾನಿಕ್ – ಜಕಾರ್ಡ್ ಖರೀದಿ ಮುಂತಾದ ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖಾ ವತಿಯಿಂದ ಅರ್ಹ ನೇಕಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಮಿಸಲಾತಿಯನ್ವಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಫಲಾನುಭವಿಯು ಬ್ಯಾಂಕಿನಲ್ಲಿ ಸಾಲ ಪಡೆದು ಘಟಕವನ್ನು ಸ್ಥಾಪಿಸಿದ ನಂತರ ಅರ್ಹತೆಯನುಸಾರ ಕೇಂದ್ರ ಕಛೇರಿಯಿಂದ ಮಂಜೂರಾದ ಭೌತಿಕ ಹಾಗೂ ಆರ್ಥಿಕ ಗುರಿಗೆ ಒಳಪಟ್ಟು ಮರುಪಾವತಿ ಆಧಾರದ ಮೇಲೆ ಸಹಾಯಧನ ಮಂಜೂರು ಮಾಡಲಾಗುವುದು.
ಫಲಾನುಭವಿಯು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ವೆಬ್‌ಸೈಟ್: njn.karnatakadht.org ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಆಪರೇಲ್ ಪಾರ್ಕ್ ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ ಭೇಟಿ ನೀಡಿ ಅಥವಾ ದೊರವಾಣಿ ಸಂಖ್ಯೆ 080-29501945 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…