ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು/ ಕೈಗಾರಿಕಾ ಸಹಕಾರ ಬ್ಯಾಂಕುಗಳು/ ಕೃಷಿಯೇತರ/ ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಹಾಗೂ ಇತರೆ ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ಮೂಲಕ ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ, ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಸರ್ಕಾರದಿಂದ ಬಡ್ಡಿ ಸಹಾಯಧನವನ್ನು ನೀಡಲು ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ.

ಈ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗೆ “ಶೂನ್ಯ” ಬಡ್ಡಿ ದರದಲ್ಲಿ ರೂ 2.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇಕಡ 11 ರಷ್ಟು ಬಡ್ಡಿ ಸಹಾಯಧನ ಮತ್ತು ಶೇ.3 ರ ಬಡ್ಡಿ ದರದಲ್ಲಿ ರೂ. 2.00 ಲಕ್ಷಗಳಿಂದ ರೂ. 5.00 ಲಕ್ಷಗಳವರೆಗೆ ನೀಡುವ ಸಾಲಕ್ಕೆ ಗರಿಷ್ಠ ಶೇ. 8 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಮುಂದುವರೆದು ರಾಜ್ಯದ ಸರ್ಕಾರಿ ಮತ್ತು ವಾಣಿಜ್ಯ ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಪಡೆಯುವ ಸಾಲದ ಮೇಲೆ ಶೇ.8% ರಷ್ಟು ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

ಯೋಜನೆಯಡಿ ನೇಕಾರಿಕೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಮಾತ್ರ ನೇಕಾರರು ಅರ್ಹರಾಗಿರುತ್ತಾರೆ(ಕ್ಯಾಶ್ ಕ್ರಿಕೆಟ್ ಸಾಲಗಳನ್ನು ಹೊರತುಪಡಿಸಿ). ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ 50,000 ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ. 1,75,000ಗಳು, ದುಡಿಮೆ ಬಂಡವಾಳಕ್ಕಾಗಿ ರೂ. 60,000 ಸಾಲಗಳನ್ನು ಸಹಕಾರ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು/ ವಾಣಿಜ್ಯ ಬ್ಯಾಂಕುಗಳ ವತಿಯಿಂದ ಪಡೆಯಬಹುದಾಗಿದೆ.

ಈ ಸಾಲ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅರ್ಹ ನೇಕಾರರು ವೆಬ್‌ಸೈಟ್ https://dev.kardht.com/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆನ್‌ಲೈನ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆ.ಐ.ಎ.ಡಿ.ಬಿ., ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ-561203 ಗೆ ಭೇಟಿ ನೀಡಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

17 hours ago