ಪ್ರಧಾನಿ ನರೇಂದ್ರ ಮೋದಿ ಅವರು 75 ವಸಂತಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹಲವಾರು ಗಣ್ಯರು ಮತ್ತು ರಾಜಕಾರಣಿಗಳು ಅವರ ನಾಯಕತ್ವವನ್ನು ಶ್ಲಾಘಿಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ ತನ್ನ ಪ್ರಮುಖ ನಾಯಕನ ಜನ್ಮದಿನವನ್ನು ಗುರುತಿಸಲು ಹದಿನೈದು ವಾರಗಳ ಕಾಲ “ಸೇವಾ ಪಾಕ್ಷಿಕ”ಅಭಿಯಾನವನ್ನು ಆರಂಭಿಸಲಾಗಿದೆ ಎಂದು ದೇವನಹಳ್ಳಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅಂಬರೀಶ್ ಗೌಡ ಹೇಳಿದರು.
ಈ ಹಿನ್ನೆಲೆ ಇಂದು ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ವತಿಯಿಂದ ಗಿಡ ನೆಡುವುದು, ಸ್ವಚ್ಚತಾ ಕಾರ್ಯವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸಮೀಪದ ಕೊಂಡಸಂದ್ರ ಗ್ರಾಮದಲ್ಲಿರುವ ಕಾಶಿ ವಿಶ್ವನಾಥ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಆರೋಗ್ಯ ಶಿಬಿರಗಳಿಂದ ಹಿಡಿದು ಸ್ವಚ್ಛತಾ ಅಭಿಯಾನ, ಬುದ್ಧಿಜೀವಿಗಳ ಸಭೆಗಳು ಮತ್ತು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮೇಳಗಳವರೆಗೆ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದರು.
ನಂತರ ವಕೀಲ ಪ್ರತಾಪ್ ಮಾತನಾಡಿ, ಸ್ವಯಂ ಸೇವಕರು, ತೂಬಗೆರೆ ಸುತ್ತಮುತ್ತಲಿನ ಸಾರ್ವಜನಿಕರು ಸೇರಿದಂತೆ ರಾಜಕೀಯ ಮುಖಂಡರು ಪುರಾತನ ಕಲ್ಯಾಣಿ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ನೂರಕ್ಕೂ ಹೆಚ್ಚು ಸ್ವಯಂ ಸೇವಕರಿಂದ ಕಲ್ಯಾಣಿ ಸ್ವಚ್ಚತಾ ಕಾರ್ಯ ನಡೆಯಿತು. ಕಲ್ಯಾಣಿಗಳ ಸ್ವಚ್ಚತೆಯಿಂದ ಮಳೆ ನೀರು ನಿಂತು ಅಂತರ್ಜಲ ಅಭಿವೃದ್ಧಿಯಾಗುವ ಉದ್ದೇಶದಿಂದ ಸ್ವಚ್ಚತೆ ಮಾಡಲಾಯಿತು ಎಂದರು.
ನಂತರ ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ಇಂದು ಕೊಂಡಸಂದ್ರದ ಕಾಶಿ ವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಾಗಿದೆ. ಕಾಲಕಾಲಕ್ಕೆ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿದರೆ ಅಂರ್ಜಲ ಮಟ್ಟ ಹೆಚ್ಚಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತಾಧಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ರವಿ, ಓಬ್ದೇನಹಳ್ಳಿ ಮುನಿಯಪ್ಪ, ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು, ಸ್ವಯಂಸೇವಕರು ಸೇರಿದಂತೆ ಪುರಾತನ ದೇವಾಲಯಗಳ ಸ್ವಚ್ಚತಾ ಸಮಿತಿ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…